spot_img
spot_img
spot_img
24 C
Belagavi
Thursday, June 1, 2023
spot_img

ಶಾಸಕ ಸತೀಶ್‌ ಜಾರಕಿಹೊಳಿ ವಿರುದ್ಧ ಷ್ಯಡ್ಯಂತ್ರಕ್ಕೆ ಮರಾಠಾ ಸಮಾಜ ಖಂಡನೆ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿಯವರು ಮರಾಠಾ ಮತ್ತು ಹಿಂದೂ ಸಮಾಜದ ವಿರೋಧಿ ಅಲ್ಲ. ಆದರೆ ಬಿಜೆಪಿ, ಆರ್‌ಎಸ್‌ಎಸ್‌ನವರು ಶಾಸಕ ಸತೀಶ್‌ ಜಾರಕಿಹೊಳಿ ವಿರುದ್ಧ ಷ್ಯಡ್ಯಂತ್ರ ರೂಪಿಸಿ, ದ್ವೇಷ ರಾಜಕಾರಣ ಮಾಡುತ್ತಿದ್ದು, ಇದನ್ನು ಮರಾಠಾ ಸಮಾಜದವರು ಸಹಿಸಲ್ಲ ಎಂದು ಮರಾಠಾ ಸಮಾಜದ ನೂರಾರು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಸತೀಶ್‌ ಜಾರಕಿಹೊಳಿಯವರು ಸದಾ ಮರಾಠಾ ಸಮುದಾಯದ ಸೇರಿದಂತೆ ಎಲ್ಲಾ ಸಮಾಜದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಅವರು ಯಾವುದೇ ಜಾತಿಗೆ ಇದುವರೆಗೂ ಅನ್ಯಾಯ ಮಾಡಿಲ್ಲ. ಆದರೆ ಶಾಸಕ ಸತೀಶ್‌ ಜಾರಕಿಹೊಳಿ ಅವರು ಮರಾಠಾ ಸಮುದಾಯದ ವಿರೋಧಿ ಇದ್ದಾರೇ ಎಂದು ಯಮಕನಮರಡಿ ಕ್ಷೇತ್ರದಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ನಮ್ಮ ವಿರೋಧವಿದೆ ಎಂದರು.

ಕೆಲವು ದಿನಗಳ ಹಿಂದೆ ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸತೀಶ್‌ ಜಾರಕಿಹೊಳಿ ಶಿವಾಜಿ ಇತಿಹಾಸದ ಬಗ್ಗೆಯೂ ಮಾತನಾಡಿದ್ದರು. ಆದರೆ ಶಾಸಕ ಸತೀಶ್‌ ಜಾರಕಿಹೊಳಿ ಅವರು ಈ ನಾಡಿನ ಜನತೆಗೆ ಇತಿಹಾಸ ತಿಳಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲವರಿಗೆ ಅವರ ಕಾರ್ಯವನ್ನು ಸಹಿಸದವರೂ ಸತೀಶ್‌ ಜಾರಕಿಹೊಳಿ ಅವರ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನೂ ಶಾಸಕ ಸತೀಶ್‌ ಜಾರಕಿಹೊಳಿ ಅವರು ಎಸ್‌ ಎಸ್‌ ಎಲ್‌ ಸಿ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲಿಷ್‌, ಮರಾಠಿ ಮಾಧ್ಯಮದಲ್ಲಿ ಪುಸ್ತಕಗಳನ್ನು ಮುದ್ರಿಸಿ ನೀಡಿದ್ಧಾರೆ. ಮತಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಆದರೆ ಕೆಲವರು ಮತಕ್ಷೇತ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಅವರ ಹೆಸರಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದು, ಅದಕ್ಕೆ ಪ್ರಾಮುಖ್ಯತೆ ನೀಡುವ ಅವಶ್ಯಕತೆ ಇಲ್ಲಾ. ಮರಾಠಾ ಸಮುದಾಯ ಸೇರಿದಂತೆ ನಾವೆಲ್ಲರೂ ಸತೀಶ್‌ ಜಾರಕಿಹೊಳಿಯವರಿಗೆ ಬೆಂಬಲ ನೀಡುತ್ತೇವೆಂದು ಹೇಳಿದರು.

ಯಮಕನಮರಡಿ ಸೇರಿದಂತೆ ಬೆಳಗಾವಿ ಜಿಲ್ಲೆಯ ಅನೇಕ ಪಟ್ಟಣ, ಗ್ರಾಮಗಳಲ್ಲಿ ಶಿವಾಜಿ ಪ್ರತಿಮೆಗಳನ್ನು ಸ್ಥಾಪಿಸುವಲ್ಲಿ ಶಾಸಕ ಸತೀಶ್‌ ಜಾರಕಿಹೊಳಿಯವರ ಪಾತ್ರ ಪ್ರಮುಖವಾಗಿದೆ. ಚುನಾವಣೆ ಬಂದಾಗ ಬಿಜೆಪಿಯವರು ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಲು ಮುಂದಾಗುತ್ತಾರೆ. ಯಮಕನಮರಡಿ ಮತಕ್ಷೇತ್ರದಲ್ಲಿ ಇನ್ನೂ ಮುಂದೆ ಶಾಸಕ ಸತೀಶ್‌ ಜಾರಕಿಹೊಳಿ ಬಗ್ಗೆ ಕೀಳು ಮಟ್ಟದ ಹೇಳಿಕೆ, ಅಪಪ್ರಚಾರ ಮಾಡಿದರೆ ನಾವು ಹೋರಾಟ ಮಾಡಬೇಕಾಗುತ್ತೆ ಎಂದು ಇದೇ ವೇಳೆ ಮರಾಠಾ ಸಮಾಜದ ಮುಖಂಡರು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮರಾಠ ಸಮಾಜ ಮುಖಂಡರಾದ ಅರುಣ ಕಟಾಂಬಳೆ, ಬಾಹುರಾವ್ ಗಡ್ಕರಿ, ಆನಂದ ಪಾಟೀಲ್, ಮನೋಹರ ಹುಕ್ಕೇರಿಕರ್, ಸಂದೀಪ್ ಜಕ್ಕಾಣೆ, ಸಾಗರ ಪಿಂಗಟ್, ಚಂದ್ರಕಾಂತ ದುಡುಮ್, ಸಿದ್ದರಾಯ ಗವಿ, ಅಣ್ಣು ಕಟಾಂಬಳೆ, ವಿಜಯ ಹೊನಮನೆ, ನಾಗೇಶ ಪಾಟೀಲ್, ವೀರಭದ್ರ ಮುಂಗಾರಿ, ರಾಮಾ ಕಡೊಲಕರ್ ಸೇರಿದಂತೆ ನೂರಾರು ಮರಾಠ ಸಮಾಜದ ಮುಖಂಡರು ಉಪಸ್ಥಿತರಿದ್ದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -