spot_img
spot_img
spot_img
21.1 C
Belagavi
Friday, September 30, 2022
spot_img

ಸಾಮೂಹಿಕ ನಕಲು; ಬೀದರ್‌ ಪರೀಕ್ಷಾ ಕೇಂದ್ರ ರದ್ದು

spot_img

ವರದಿ: ಪರಮೇಶ.ಡಿ.ವಿಳಸಪೂರೆ

ಬೀದರ: ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಎಂಪಿಸಿ ಮಾಡಿದ್ದು, ಬೀದರ್‌ನ ಸನ್‌ ಸಾಫ್ಟ್‌ ಪದವಿ ಕಾಲೇಜಿನಲ್ಲಿ ಸಾಮೂಹಿಕ ನಕಲು ನಡೆಸುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರವನ್ನು ರದ್ದು ಮಾಡಲಾಗಿದೆ.

ಬುಧವಾರ ಕಲಬುರಗಿ ಮತ್ತು ಬೀದರ್‌ ಜಿಲ್ಲೆಗಳ ಹಲವು ಕಾಲೇಜುಗಳಿಗೆ ಭೇಟಿ ನೀಡಿದ ಪರೀಕ್ಷಾ ವಿಭಾಗದ ಕುಲಸಚಿವೆ ಡಾ| ಮೇಧಾವಿನಿ ಕಟ್ಟಿ , ಬೀದರ್‌ನ ಚಂದ್ರಶೇಖರ ಪದವಿ ಮಹಾವಿದ್ಯಾಲಯದಲ್ಲಿ ಇಬ್ಬರು ವಿದ್ಯಾರ್ಥಿಗಳು ಪುಸ್ತಕ ಇಟ್ಟುಕೊಂಡು ನಕಲು ಮಾಡುತ್ತಿರುವುದನ್ನು ಗಮನಿಸಿ ತಕ್ಷಣವೇ ಅವರನ್ನು ಎಂ.ಪಿ.ಸಿ. ಮಾಡಿದರು. ಅಲ್ಲದೇ ಸರ್ಕಾರಿ ಪ್ರಥಮ ದರ್ಜೆ ಪದವಿ ಮಹಾವಿದ್ಯಾಲಯ, ಹುಮನಾಬಾದನಲ್ಲಿ ಬಿ.ಎಸ್ಸಿ ಐದನೇ ಸೆಮಿಸ್ಟರ್‌ ಭೌತಶಾಸ್ತ್ರ ವಿಷಯದ ಒಬ್ಬ ವಿದ್ಯಾರ್ಥಿ ನಕಲು ಮಾಡಿ ಸಿಕ್ಕು ಬಿದ್ದ ಪರಿಣಾಮ ಎಂಪಿಸಿ ಮಾಡಿದರು. ಇದಲ್ಲದೇ, ಕಲಬುರಗಿಯ ಎಸ್‌.ಬಿ. ವಾಣಿಜ್ಯ, ಎಸ್‌.ಬಿ. ವಿಜ್ಞಾನ ಪದವಿ ಮಹಾವಿದ್ಯಾಲಯ, ಶಾಂತಿನಿಕೇತನ ಪದವಿ ಮಹಾವಿದ್ಯಾಲಯ, ನೂತನ ವಿದ್ಯಾಲಯ, ನಾರ್ಥ ಕರ್ನಾಟಕ ಪದವಿ ಮಹಾವಿದ್ಯಾಲಯ, ಎಂಜೆಪಿ ಪದವಿ ಮಹಾವಿದ್ಯಾಲಯ ಮತ್ತು ಎಕೆಎಸ್‌ಜಿವಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದಾಗ ಈ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುತ್ತಿರುವುದನ್ನು ಗಮನಿಸಿ ಸಂತೋಷ ವ್ಯಕ್ತಪಡಿಸಿದರು.

ಪರೀಕ್ಷಾ ಕೇಂದ್ರ ರದ್ದು:

ಬೀದರ್‌ ಸನ್‌ ಸಾಫ್ಟ್‌ ಪದವಿ ಮಹಾವಿದ್ಯಾಲಯ, ಚಂದ್ರಶೇಖರ ಪದವಿ ಮಹಾವಿದ್ಯಾಲಯ ಮನ್ನಾಖೇಳ್ಳಿ ಮತ್ತು ಬಿವಿಬಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದಾಗ ಸನ್‌ ಸಾಫ್ಟ್‌ ಪದವಿ ಮಹಾವಿದ್ಯಾಲಯದಲ್ಲಿ ಕಿರಿಯ ಮೇಲ್ವಿಚಾರಕರು ಮತ್ತು ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ಏಳು ಜನ ವಿದ್ಯಾರ್ಥಿಗಳು ಸೇರಿಕೊಂಡು ಸಾಮೂಹಿಕ ನಕಲು ಮಾಡುತ್ತಿರುವುದನ್ನು ಪರೀಕ್ಷಾ ವಿಭಾಗದ ಕುಲಸಚಿವೆ ಡಾ| ಮೇಧಾವಿನಿ ಕಟ್ಟಿ ಕಂಡು ಸಿಡಿಮಿಡಿಗೊಂಡರು. ಅಲ್ಲದೆ, ಕೂಡಲೇ ಪರೀಕ್ಷಾ ಕೇಂದ್ರವನ್ನು ರದ್ದು ಮಾಡಲು ಆದೇಶ ಹೊರಡಿಸಿದರು. ರದ್ದಾದ ಪರೀಕ್ಷಾ ಕೇಂದ್ರದಲ್ಲಿ ನಡೆಬೇಕಾಗಿರುವ ಮುಂದಿನ ಪರೀಕ್ಷೆಗಳನ್ನು ಬಿವಿಬಿ ಪರೀಕ್ಷಾ ಕೇಂದ್ರಕ್ಕೆ ವರ್ಗಾಯಿಸಿದ್ದಾರೆ ಎಂದು ವಿವಿ ಮೂಲಗಳು ತಿಳಿಸಿವೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -