spot_img
spot_img
spot_img
34.1 C
Belagavi
Monday, May 29, 2023
spot_img

ನಿವೃತ್ತ ನ್ಯಾ. ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸಂಘಟನೆಗಳ ಬೃಹತ್ ಪ್ರತಿಭಟನೆ 

ಬೆಳಗಾವಿ : ನಿವೃತ್ತ ನ್ಯಾಯಾಧೀಶ ಎಜೆ ಸದಾಶಿವ ಆಯೋಗದ ವರದಿ ಜಾರಿಗಾಗಿ ಸಾಮಾಜಿಕ ನ್ಯಾಯ ಸಂಕಲ್ಪ ರ್ಯಾಲಿಯನ್ನು ಹಮ್ಮಿಕೊಳ್ಳಲಾಯಿತ್ತು.

ಚಲೋ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಸಂಘಟನೆ ವತಿಯಿಂದ ಬೆಳಗಾವಿ ಚಲೋ ನಡೆಸಲಾಯಿತು.

ರಾಣಿ ಚೆನ್ನಮ್ಮ ವೃತ್ತದಿಂದ ಸುವರ್ಣಸೌಧದ ವರೆಗೆ ಪರಿಶಿಷ್ಟರ ಒಳ ಮೀಸಲಾತಿ ಜಾರಿಗಾಗಿ ಸಾಮಾಜಿಕ ನ್ಯಾಯ ಸಂಕಲ್ಪ ರ್ಯಾಲಿಯನ್ನು ರಾಜ್ಯಾಧ್ಯಕ್ಷರಾದ ಡಾ. ಎನ್ ಮೂರ್ತಿ ಮತ್ತು ಜಿಲ್ಲಾಧ್ಯಕ್ಷರಾದ ಶಿವಾನಂದ ಮಾದರ ಮತ್ತು ಸಂಚಾಲಕರಾದ ಸಿದ್ದರಾಮ ಹೊಸಮನಿ ಮತ್ತು ಬೈಲಹೊಂಗಲ ತಾಲೂಕ ಅಧ್ಯಕ್ಷರಾದ ಮಹೇಶ್ವರಿ ಅವರ ನೇತೃತ್ವದಲ್ಲಿ ನಡೆಯಿತು.

ರಾಜ್ಯಾಧ್ಯಕ್ಷ ಎನ್ ಮೂರ್ತಿಯವರು ರ್ಯಾಲಿ ಮುಖ್ಯ ಕಾರಣವನ್ನು ಉದ್ದೇಶದ ಬಗ್ಗೆ ಮಾತನಾಡಿ, 101 ಪರಿಶಿಷ್ಟ ಜಾತಿಗಳಿಗೆ ನೀಡುತ್ತಿರುವ ಮೀಸಲಾತಿ ಜಾತಿಗಳ ಮಧ್ಯೆ ಸಮನಾಗಿ ಹಂಚಿಕೆ ಆಗಿಲ್ಲ.

ಆದ್ದರಿಂದ ಪರಿಶಿಷ್ಟ ಜಾತಿಗಳ ಜನರಲ್ಲಿ ಅಸಮಾಧಾನ ಉಂಟಾಗಿ ಕಳೆದ 30 ವರ್ಷಗಳಿಂದ ಪರಿಶಿಷ್ಟ ಮೀಸಲಾತಿಗಾಗಿ ಒತ್ತಾಯಿಸಿ ತೀವ್ರ ಹೋರಾಟ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಚಳುವಳಿಗಾರರೊಂದಿಗೆ ಚರ್ಚಿಸಿ ಮಾತುಕತೆ ನಡೆಸಿಲ್ಲ ಅಸಮಾಧಾನ ವ್ಯಕ್ತಪಡಿಸಿದರು.

ಮುಂದುವರೆದು ಮಾತನಾಡಿ, ಪರಿಶಿಷ್ಟ ಮೀಸಲಾತಿ ವರ್ಗೀಕರಣಕ್ಕಾಗಿ 2005 ರಲ್ಲಿನ ಸದಾಶಿವ ಆಯೋಗ ರಚಿಸಿತ್ತು. ಆಯೋಗ 2012ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇಲ್ಲಿಗೆ 17 ವರ್ಷ ಕಳೆದರೂ ಆಯೋಗದ ವರದಿಯನ್ನು ಸರ್ಕಾರ ಅಂಗೀಕರಿಸಿಲ್ಲ ಹಾಗೂ ಅನುಷ್ಠಾನಗೊಳಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -