spot_img
spot_img
spot_img
21.1 C
Belagavi
Friday, September 30, 2022
spot_img

ನಂದಿಹಳ್ಳಿಯಲ್ಲಿ 1.07 ಕೋಟಿ ರೂ.ವೆಚ್ಚದ ಕಾಮಗಾರಿಗಳಿಗೆ ಶಾಸಕಿ ಹೆಬ್ಬಾಳಕರ್ ಚಾಲನೆ

spot_img

ವರದಿ : ರತ್ನಾಕರ್ ಗೌಂಡಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ನಂದಿಹಳ್ಳಿಯಲ್ಲಿ 1.07 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಶನಿವಾರ ಸಂಜೆ ಚಾಲನೆ ನೀಡಿದರು.

ಕರ್ನಾಟಕ ನೀರಾವರಿ ನಿಗಮದ ವತಿಯಿಂದ 60 ಲಕ್ಷ ರೂ,ಗಳ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯ‌ ನಿರ್ಮಾಣದ ಕಾಮಗಾರಿ, ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 28 ಲಕ್ಷ ರೂ,ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಯರಮಾಳವರೆಗೆ ರಸ್ತೆಯ ಅಭಿವೃದ್ಧಿ, ಲೋಕೋಪಯೋಗಿ ಇಲಾಖೆಯ ವತಿಯಿಂದ 12 ಲಕ್ಷ ರೂ,ಗಳ ವೆಚ್ಚದಲ್ಲಿ ನಂದಿಹಳ್ಳಿ ಗ್ರಾಮದಿಂದ ಬೊರಗಾಂವ ಗರ್ಲಗುಂಜಿ ರಸ್ತೆಯ ಅಭಿವೃದ್ಧಿಗೆ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.

ಬ್ರಹ್ಮಲಿಂಗ ದೇವಸ್ಥಾನದ ಅಭಿವೃದ್ಧಿಗಾಗಿ ಶಾಸಕರ ಅನುದಾನದಲ್ಲಿ ದೇವಸ್ಥಾನದ ಕಮೀಟಿಯವರಿಗೆ 7 ಲಕ್ಷ ರೂ,ಗಳ ಚೆಕ್ ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು. ಜೊತೆಗೆ ನೂತನವಾಗಿ ನಿರ್ಮಾಣಗೊಂಡ ಪಶು ಆಸ್ಪತ್ರೆಯನ್ನು ಸಹ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಯುವರಾಜ ಕದಂ, ಮೃಣಾಲ ಹೆಬ್ಬಾಳಕರ್, ಸ್ಥಳೀಯ ಜನಪ್ರತಿನಿಧಿಗಳು, ಸಂಜು ಮಾದರ, ಸಾತೇರಿ ಬೆಳವತ್ಕರ್, ಜಿ ಕೆ ಪಾಟೀಲ, ನಿಂಗವ್ವ ಕುರುಬರ, ಮಹಾದೇವ ಜಾಧವ್, ರಾಮದಾಸ ಜಾಧವ್, ಸಹದೇವ ಬೆಳಗಾವ್ಕರ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -