spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಮೈಸೂರು ರಂಗಾಯಣದಿಂದ ಶೀಘ್ರದಲ್ಲಿ “ಪರ್ವ” ನಾಟಕ ಪ್ರದರ್ಶನ: ಮಠಪತಿ

ಬೆಳಗಾವಿ: ಮೈಸೂರು ರಂಗಾಯಣ ವತಿಯಿಂದ ಬೃಹತ್ ರಂಗಪ್ರಯೋಗ “ಪರ್ವ” ನಾಟಕ ಪ್ರದರ್ಶನವನ್ನು ಬೆಳಗಾವಿಯಲ್ಲಿ ಆಯೋಜಿಸಲಾಗುತ್ತಿದ್ದು, ಈ ಕುರಿತು ಮುಂಬರುವ ದಿನಗಳಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಿ ನಾಟಕ ಪ್ರದರ್ಶನದ ರೂಪುರೇಷೆಗಳನ್ನು ಸಿದ್ಧಪಡಿಸಲಾಗುವುದು ಎಂದು ರಂಗಾಯಣ ಮೈಸೂರು ಉಪ ನಿರ್ದೇಶಕರಾದ ನಿರ್ಮಲಾ ಮಠಪತಿ ತಿಳಿಸಿದರು.

ಮೈಸೂರು ರಂಗಾಯಣ ವತಿಯಿಂದ ಪರ್ವ ನಾಟಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ನಗರದ ಕಟ್ಟಿಮನಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತೆ ಸಭೆಯಲ್ಲಿ ಅವರು ಮಾತನಾಡಿದರು.

ಪರ್ವ’ ನಾಟಕದ ಪ್ರದರ್ಶನವನ್ನು ರಂಗಾಯಣ ವತಿಯಿಂದ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಪರ್ವ ನಾಟಕದ ಮೂಲಕ ನಾವು ಹಿರಿಯ ಸಾಹಿತಿಗೂ ಗೌರವ ನೀಡಿದಂತಾಗುತ್ತದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ನಾಟಕ ಪ್ರದರ್ಶನದ ಕುರಿತು ಗ್ರಾಮೀಣ ಭಾಗದಲ್ಲಿಯೂ ಸಹ ಪ್ರಚಾರ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಠಪತಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿ.ಎಸ್ ಗವಿಮಠ ಅವರು ಎಸ್. ಎಲ್. ಬೈರಪ್ಪ ಅವರ ಕಾದಂಬರಿ ಆಧಾರಿತ ನಾಟಕ ಪ್ರದರ್ಶನ ಇದಾಗಿದೆ. ಮಹಾಭಾರತವನ್ನು ವೈಚಾರಿಕ ದೃಷ್ಟಿಯೊಂದಿಗೆ ಕಟ್ಟಿಕೊಟ್ಟ ಈ ಕಾದಂಬರಿ ವಿದೇಶಿ ಭಾಷೆಗಳಿಗೂ ಅನುವಾದಗೊಂಡಿದ್ದು, ಜನಮನ್ನಣೆ ಪಡೆದಿದೆ ಎಂದರು.

ಎಸ್.ಎಲ್.ಭೈರಪ್ಪನವರ ಬರವಣಿಗೆಯಲ್ಲೆ ಅತ್ಯಂತ ಉತ್ಕೃಷ್ಟ ಕಾದಂಬರಿಗಳಲ್ಲಿ ಒಂದು ಈ ‘ಪರ್ವ’ ಕಾದಂಬರಿಯಾಗಿದ್ದು, ಇಂತಹ ಕಾದಂಬರಿ ಈಗ ನಾಟಕದ ಸ್ವರೂಪದಲ್ಲಿ ಜನರ ಮುಂದಿರಿಸುವ ಯತ್ನ ನಮ್ಮದಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾದ ಬಸವರಾಜ ಹೂಗಾರ, ಸಹಾಯಕ ನಿರ್ದೇಶಕರಾದ ವಿದ್ಯಾವತಿ ಭಜಂತ್ರಿ, ಹಿರಿಯ ಸಾಹಿತಿಗಳಾದ ಡಾ.ಸರಜೂ ಕಾಟ್ಕರ್, ಡಾ.ರಾಮಕೃಷ್ಣ ಮರಾಠೆ, ಶಿರಿಷ ಜೋಶಿ, ಚಂದ್ರಕಾಂತ ಪೋಕಳೆ, ಡಾ.ಎ.ಬಿ.ಘಾಟಗೆ, ನಾಟಕಕಾರರಾದ ಡಾ.ಡಿ.ಎನ್.ಚೌಗಲೆ, ರಂಗತಜ್ಞರಾದ ಸುಭಾಸ ಏಣಗಿ, ಮಲ್ಲನಗೌಡ ಪಾಟೀಲ, ಅನಂತಕುಮಾರ ಬ್ಯಾಕೂಡ, ಬಸವರಾಜ ಗಾರ್ಗಿ, ಆರ್.ಬಿ.ಕಟ್ಟಿ, ಅನಂತ ತಪ್ಪು ಮತ್ತಿತರರು ಉಪಸ್ಥಿತರಿದ್ದರು.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -