Ad imageAd image

2025- ಹೊಸ ವರುಷದಲ್ಲಿ ತೆರೆಯಲಿ ಹೊಸ ಅವಕಾಶಗಳ ಬುತ್ತಿ; ಪ್ರಧಾನಿ ಮೋದಿ ಶುಭ ಹಾರೈಕೆ

ratnakar
2025- ಹೊಸ ವರುಷದಲ್ಲಿ ತೆರೆಯಲಿ ಹೊಸ ಅವಕಾಶಗಳ ಬುತ್ತಿ; ಪ್ರಧಾನಿ ಮೋದಿ ಶುಭ ಹಾರೈಕೆ
WhatsApp Group Join Now
Telegram Group Join Now

ಹೊಸದಿಲ್ಲಿ: ದೇಶಾದ್ಯಂತ 2025ರ ಹೊಸ ವರ್ಷದ ಸಂಭ್ರಮಾಚರಣೆ ಮನೆ ಮಾಡಿದ್ದು, ಜನತೆ ಅತ್ಯಂತ ಅದ್ದೂರಿಯಿಂದ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ. ಈ ಮಧ್ಯೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದು, ನೂತನ ವರ್ಷವೂ ಎಲ್ಲರಿಗೂ ಹೊಸ ಅವಕಾಶಗಳ ಬಾಗಿಲನ್ನು ತೆರೆಯಲಿ ಎಂದು ಶುಭ ಹಾರೈಸಿದ್ದಾರೆ.

ತಮ್ಮ ಅಧಿಕೃತ ‘ಎಕ್ಸ್‌’ ಅಕೌಂಟ್‌ನಲ್ಲಿ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರುವುದಾಗಿ ಹೇಳಿದ್ದಾರೆ. ಹೊಸ ವರ್ಷದಲ್ಲಿ ಭಾರತದ ಅಭಿವೃದ್ಧಿಯ ನಾಗಾಲೋಟ ಮತ್ತಷ್ಟು ವೇಗ ಪಡೆದುಕೊಳ್ಳಲಿ ಎಂದು ಪ್ರಧಾನಿ ಮೋದಿ ಇದೇ ವೇಳೆ ಪ್ರಾರ್ಥಿಸಿದ್ದಾರೆ.

ಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷವು ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ಆಶೀರ್ವದಿಸಲಿ..” ಎಂದು ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ.

ಭಾರತ ಈಗ ಜಗತ್ತಿಗೆ ಮಾರ್ಗದರ್ಶನ ಮಾಡುವ ಸಾಮರ್ಥ್ಯವನ್ನು ಪಡೆದುಕೊಂಡಿದ್ದು, ಜಾಗತಿಕ ಒಳಿತಿಗಾಗಿ ತನ್ನೆಲ್ಲಾ ಶಕ್ತಿ-ಸಾಮರ್ಥ್ಯವನ್ನು ಧಾರೆ ಎರೆಯಲಿದೆ. ಹೊಸ ವರ್ಷದಲ್ಲಿ ನಮ್ಮ ಸಾಮೂಹಿಕ ಪ್ರಯತ್ನಗಳು ದೇಶವನ್ನು ಮತ್ತಷ್ಟು ಸದೃಢಗೊಳಿಸಲಿದೆ ಎಂಬ ವಿಶ್ವಾಸ ನನ್ನಲ್ಲಿದೆ..” ಎಂದು ಪ್ರಧಾನಿ ಮೋದಿ ನುಡಿದಿದ್ದಾರೆ.

WhatsApp Group Join Now
Telegram Group Join Now
Share This Article