spot_img
spot_img
spot_img
28.1 C
Belagavi
Thursday, September 29, 2022
spot_img

ಮೇಯರ್ – ಉಪ ಮೇಯರ್ ಆಯ್ಕೆ ನಂತರ ಬಜೆಟ್ ಮಂಡನೆ ಮಾಡಿ : ರಾಜು ಟೋಪಣ್ಣವರ

spot_img

ಬೆಳಗಾವಿ :  ಮಹಾನಗರ ಪಾಲಿಕೆ  ಚುನಾವಣೆ ಮುಗಿದು 6 ತಿಂಗಳಾದರೂ  ನೂತನ ಸದಸ್ಯರಿಗೆ  ಪದಗ್ರಹಣ ಮಾಡಲು ಜನಪ್ರತಿನಿಧಿಗಳಿಗೆ ಅವಕಾಶ ಕಲ್ಪಿಸಿ ಕೊಟ್ಟಿಲ್ಲ ಪಾಲಿಕೆಯ  ಚುನಾಯಿತ ಪ್ರತಿನಿಧಿಗಳು  ಅವರನ್ನು ಹೊರಗಿಟ್ಟು ಪಾಲಿಕೆ ಬಜೆಟ್ ಮಂಡನೆ ಮಾಡುತ್ತಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಇದೊಂದು ದೊಡ್ಡ ಕಳಂಕ ಎಂದು ಆಪ್ ಪಕ್ಷದ ಮುಖಂಡ ರಾಜು ಟೋಪಣ್ಣವರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಮಾತನಾಡಿದ ರಾಜು ಟೋಪಣ್ಣವರ  ಮುಂದೆ ವಿವಿಧ ಕಾರಣಗಳಿಂದ ಮೊದಲೇ ಮಹಾನಗರ ಪಾಲಿಕೆ ಚುನಾವಣೆ ಎರಡು ವರ್ಷಗಳ ಕಾಲ ಮುಂದೂಡಲ್ಪಟ್ಟಿತ್ತು ಆದರೆ ಈಗ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇದ್ದರೂ ಸಹ ಅವರೆಲ್ಲರಿಗೆ ಪ್ರಮಾಣವಚನ ಸ್ವೀಕಾರ ಮಾಡಿಲ್ಲ ಇದರಿಂದ ನಗರದ ಅಭಿವೃದ್ಧಿ ಕುಂಠಿತವಾಗಿದೆ ಅಲ್ಲದೆ ಪ್ರಸ್ತುತ ಬಜೆಟ್’ನಲ್ಲಿ  ಮೇಯರ್-ಉಪ ಮೇಯರ್  ಇಲ್ಲದೆ ಬಜೆಟ್ ಮಂಡಿಸುತ್ತಿರುವ ಬೆಳಗಾವಿ ಮಾಹಾನಗರ ಪಾಲಿಕೆಯ ದುರಂತವೆಂದರು.

 ಕೂಡಲೇ ಮುಖ್ಯಮಂತ್ರಿಗಳು ಬೆಳಗಾವಿ ಮೇಯರ್ ಹಾಗೂ ಉಪ ಮೇಯರ್ ಆಯ್ಕೆ ಮಾಡಿ ಬಜೆಟ್ ಮಂಡನೆ ಮಾಡಲು ಅವಕಾಶ ಮಾಡಿಕೊಡಬೇಕು  ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.  ಈ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ರತ್ನಾಕರ ಗೌಂಡಿ,ಬೆಳಗಾವಿ

spot_img

Related News

ತಾಳ್ಮೆ ಕಳೆದುಕೊಂಡು ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ : ಮಾಜಿ ಸಿಎಂ ಯಡಿಯೂರಪ್ಪ 

ಶಿವಮೊಗ್ಗ: ಇತ್ತೀಚೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಾಳ್ಮೆ ಕಳೆದುಕೊಂಡು ಹುಚ್ಚುಚ್ಚರಾಗಿ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಾಗ್ದಾಳಿ ನಡೆಸಿದ್ದಾರೆ. ನಗರದ ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ತಲೆಕೆಟ್ಟಿದೆ....

ಯಾರ ಮೇಲೆ ಜಾಸ್ತಿ ಪ್ರೀತಿ ಇರುತ್ತೋ ಅವರ ಮೇಲೆ ರೈಡ್ ಮಾಡ್ತಾರೆ : ಡಿಕೆಶಿ 

ಬೆಂಗಳೂರು: ಈಗಾಗಲೇ ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ ಶಿವಕುಮಾರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -