ಬೆಂಗಳೂರು: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಭೇಟಿಯೋ ಅಥವಾ ರಾಜಕೀಯ ಭೇಟಿನೋ ನನಗೆ ಗೊತ್ತಿಲ್ಲ. ರಮೇಶ್ ಜಾರಕಿಹೊಳಿಗೆ ಕಾಂಗ್ರೆಸ್ ಸೇರುವ ಒಲವು ಇರಬಹುದು. ಬೇರೆ ಪಕ್ಷದ ನಾಯಕರ ಸೇರುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದರು.
ಆಪರೇಷನ್ ಕಮಲ ಮಾಡಬೇಕಾದರೆ 65 ಶಾಸಕರು ಬೇಕು. ಬಿಜೆಪಿಗೆ ಅಷ್ಟು ಶಾಸಕರು ಸಿಗುತ್ತಾರಾ? ಐದು ಶಾಸಕರು ಕೂಡ ಸಿಗಲ್ಲ. ಆಪರೇಷನ್ ನಂತರ ಬಿಜೆಪಿಯವರ ಕಥೆ ಏನಾಗಿದೆ ಗೊತ್ತಿದೆಯಲ್ಲ. ಬಿಜೆಪಿ ಮುಳುಗುತ್ತಿರೋ ಹಡಗಲ್ಲ ಈಗಾಗಲೇ ಮುಳುಗಿರುವ ಹಡಗು. ಬಿಜೆಪಿಯಲ್ಲಿ ನಾಯಕರಿಲ್ಲ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ಬಿಜೆಪಿಯಲ್ಲಿ ಏನೂ ಉಳಿದಿಲ್ಲ, ಸಂಪೂರ್ಣ ನಿರ್ಣಾಮವಾಗುತ್ತದೆ ಎಂದು ವಾಗ್ದಾಳಿ ಮಾಡಿದರು.