spot_img
spot_img
spot_img
18.7 C
Belagavi
Monday, September 26, 2022
spot_img

ಶಾಸಕಿ ಹೆಬ್ಬಾಳಕರ್ ಜೊತೆ ಕೆಎಟಿ ಪೀಠ ಸ್ಥಳ ಪರಿಶೀಲಿಸಿದ ಅಧ್ಯಕ್ಷರು, ಸದಸ್ಯರು

spot_img
spot_img

For Breaking News Download App

ಬೆಳಗಾವಿ: ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (KAT) ಪೀಠ ಸ್ಥಾಪನೆ ಸಂಬಂಧ ಕೆಎಟಿ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು ಭಾನುವಾರ ಸ್ಥಳೀಯ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಜೊತೆ ಸ್ಥಳ ಪರಿಶೀಲನೆ ನಡೆಸಿ, ಚರ್ಚಿಸಿದರು.

ಬೆಳಗಾವಿಯಲ್ಲಿ ಸ್ಥಾಪನೆ ಮಾಡಲು ಹಿಂಡಲಗಾ ಗ್ರಾಮದ ಸಿಂಧಿ ಕಾಲೋನಿಯ ಕಲ್ಯಾಣ ಮಂಟಪ ಹತ್ತಿರವಿರುವ ಒಂದು ಎಕರೆ ಪ್ರದೇಶವನ್ನು ಈಗಾಗಲೆ ಮಂಜೂರು ಮಾಡಲಾಗಿದೆ. ಭಾನುವಾರ ಆಯ್ಕೆ ಮಾಡಿರುವ ಸ್ಥಳಕ್ಕೆ ತೆರಳಿ ಸಾಧ್ಯಾಸಾಧ್ಯತೆ ಕುರಿತು ಚರ್ಚಿಸಲಾಯಿತು.

ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯ ಅಧ್ಯಕ್ಷರಾದ ಆರ್ ಬಿ ಬೂದಿಹಾಳ ಹಾಗೂ ಸದಸ್ಯರಾದ ಟಿ.ನಾರಾಯಣ ಸ್ವಾಮಿ, ವಿಲೇಖನಾಧಿಕಾರಿ ಎಸ್ ಕೆ ಒಂಟಿಗೋಡಿ, ಕೆ ಎಸ್ ನಾಗರತ್ನ, ತಹಶಿಲ್ದಾರ ಆರ್.ಕೆ. ಕುಲಕರ್ಣಿ ಹಾಗೂ ಬೆಳಗಾವಿ ವಕೀಲರ ಸಂಘದ ಅಧಕ್ಷ ಪ್ರಭು ಯತ್ನಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಆಯ್ಕೆ ಮಾಡಿರುವ ಸ್ಥಳವು ಶೇ. 30ರಷ್ಟು ಹಳ್ಳದಿಂದ ಕೂಡಿದ್ದು, ಶೇ. 20ರಷ್ಟು ಸಿಡಿಪಿ ಯೋಜನೆಯ ಪ್ರಕಾರ ರಸ್ತೆಯನ್ನು ಒಳಗೊಂಡಿದೆ. ಹಾಗಾಗಿ ಒಂದು ಎಕರೆಯ ಪೈಕಿ ಶೇ.50ರಷ್ಟು ಜಾಗ ಮಾತ್ರ ಸಿಗುವುದರಿಂದ ಸ್ಥಳದ ಅಭಾವವಾಗಲಿದೆ. ಇದೇ ಹಿಸ್ಸಾದಲ್ಲಿ ಇನ್ನೂ 20 ಗುಂಟೆ ಖಾಲಿ ಸ್ಥಳವಿದ್ದು, ಈ ಸ್ಥಳವನ್ನು ಕೆಎಟಿಗೆ ಒದಗಿಸಿಕೊಡಲು ಸರಕಾರದ ಅನುಮೋದನೆ ಪಡೆಯುವಂತೆ ತಹಸಿಲ್ದಾರರಿಗೆ ಸೂಚಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಸಂಪತ್ ನೇಮಗೌಡರ, ಸಂತೋಷ ಶಹಾಪೂರ, ಎಸ್ ಎನ್ ಗೌಡರ ಹಾಗೂ‌ ಮುಂತಾದವರು ಉಪಸ್ಥಿತರಿದ್ದರು.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -