spot_img
spot_img
spot_img
18.7 C
Belagavi
Monday, September 26, 2022
spot_img

ವಿಧಾನ ಪರಿಷತ್ ಚುನಾವಣೆ : ಇಂದೇ ಮೂರು ಪಕ್ಷಗಳ ಅಭ್ಯರ್ಥಿಗಳು ಪಟ್ಟಿ ಬಿಡುಗಡೆ.?!

spot_img
spot_img

For Breaking News Download App

ಬೆಂಗಳೂರು: ನಾಳೆಯೇ ವಿಧಾನಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಇಂದು ( ಬಿಜೆಪಿ, ಕಾಂಗ್ರೆಸ್, ಜೆಡಿಎಸ್) ಮೂರು ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ದಟ್ಟವಾಗಿದೆ.

ವಿಧಾನಪರಿಷತ್ ನ 7 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆಗೆ ಮೂರು ಪಕ್ಷಗಳಲ್ಲಿಯೂ ಕಸರತ್ತು ನಡೆದಿದೆ. ನಾಮಪತ್ರ ಸಲ್ಲಿಸಲು ನಾಳೆ ಕೊನೆ ದಿನವಾಗಿದ್ದರೂ, ಇದುವರೆಗೂ ಒಬ್ಬರೂ ನಾಮಪತ್ರ ಸಲ್ಲಿಸಿಲ್ಲ.
ಬಿಜೆಪಿ ಮತ್ತು ಕಾಂಗ್ರೆಸ್ ವರಿಷ್ಠರು ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದು, ಇಂದು ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಜೆಡಿಎಸ್ ನಲ್ಲಿ ಅಭ್ಯರ್ಥಿಗಳ ಆಯ್ಕೆಯ ನಿರ್ಧಾರವನ್ನು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ವಿವೇಚನೆಗೆ ಬಿಡಲಾಗಿದೆ.
ಇಂದು ಮೂರು ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಮಾಡಿ ವರಿಷ್ಠರಿಗೆ ಪಟ್ಟಿ ಕಳುಹಿಸಿದೆ. ಕಾಂಗ್ರೆಸ್ ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಇಂದು ಅಭ್ಯರ್ಥಿಗಳ ಆಯ್ಕೆ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -