ಬೆಳಗಾವಿ : ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸ್ಥಾಪನೆಗೆ 126.27ಎಕರೆ ಸರ್ಕಾರಿ ಜಮೀನು ಮೀಸಲಿರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಹೇಳಿದರು
ವಿಧಾನಸಭೆಯಲ್ಲಿ ಗುರುವಾರ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನೆಗೆ ಉತ್ತರಿಸಿದ ಅವರು, ವಿ.ವಿಗೆ ಹಿರೇಬಾಗೇವಾಡಿ- ಹಾಲಗಿಮರ್ಡಿ ಗ್ರಾಮದಲ್ಲಿ ಮುಂಜೂರಾದ ಜಾಗದಲ್ಲಿ ಕಂಪೌಂಡ್ ನಿರ್ಮಾಣ ಕಾಮಗಾರಿ ಪ್ರಗತಿಯ ಹಂತದಲ್ಲಿದ್ದು, ಮೊದಲನೇ ಹಂತದ ಕಟ್ಟಡ ಕಾಮಗಾರಿಗೆ ಸ್ಥಳೀಯ ರೈತರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿ.9ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರೈತರು ಹಾಗು ವಿವಿಯ ಹಿರಿಯ ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರೈತರಿಗೆ ಕಬ್ಬು ಹಾಗೂ ಇನ್ನಿತರೆ ಕೃಷಿ ಸಂಬಂಧಿತ ವಸ್ತುಗಳನ್ನು ಸಾಗಿಸಲು ಅನುಕೂಲವಾಗುವಂತೆ ರಸ್ತೆ ಬಿಟ್ಟುಕೊಡಲು ವಿಶ್ವವಿದ್ಯಾಲಯ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಕಂಪೌಂಡ್ ಗೋಡೆಯನ್ನು ತೆರವುಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗಿದೆ ಎಂದರು.