spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಹಿರಿಯ ನಾಗರಿಕರಿಗೆ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ‌‌ ಸೌಲಭ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಣೆ

ಬೆಂಗಳೂರು:ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಘೋಷಿಸಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ನಡೆದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ನಡೆದ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ’-2023 ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಚಿವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು ಎನ್ನುವುದು ನಮ್ಮ ಉದ್ದೇಶ. ಶೀಘ್ರದಲ್ಲೇ ಈ ಕುರಿತ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.
ತಂದೆ- ತಾಯಿ, ಹಿರಿಯರು ನಮಗೆ ಕಣ್ಣಿಗೆ ಕಾಣುವ ದೇವರು. ಹಿರಿಯ ನಾಗರಿಕರ ಯೋಗಕ್ಷೇಮ ಕೇಂದ್ರದಲ್ಲಿ ಅನೇಕ ನೂನ್ಯತೆಗಳಿವೆ. ಅವುಗಳಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

*ಹಿರಿಯರನ್ನು ಸಾಕುವ ಜವಾಬ್ದಾರಿ ನಮ್ಮದು*
ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ಇಂದಿನ ಯುವಪೀಳಿಗೆ ಮೇಲಿದೆ‌‌. ಹಿರಿಯ ಜೀವಗಳ ಮನಸ್ಸನ್ನು ನೋಯಿಸದೆ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಈ ದೇಶ ರಾಮನ ದೇಶ, ಶ್ರವಣಕುಮಾರನ ದೇಶ, ತಂದೆತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ ಯುವ ಜನತೆ ಬೆಳೆಯಬೇಕು ಎಂದು ಯುವಕರಿಗೆ ಸಚಿವೆ ಕರೆ ನೀಡಿದರು.

ನಮ್ಮ ಸಂಸ್ಕೃತಿಯನ್ನು ಮರೆಯದೇ ಮುನ್ನಡೆಯಬೇಕು. ಅಲ್ಲದೆ, ತಂದೆ ತಾಯಿಗೆ ಯಾರು ಗೌರವ ಕೊಡುತ್ತಾರೊ ಅಂತಹವರು ಜೀವನದಲ್ಲಿ ಮುಂದೆ ಬರುತ್ತಾರೆ ಎಂದರು.
ಸಮಾರಂಭದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ್, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ ಉಪಸ್ಥಿತರಿದ್ದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -