spot_img
spot_img
spot_img
spot_img
spot_img
spot_img
spot_img
20.1 C
Belagavi
Sunday, December 10, 2023
spot_img

ಕುಡಿಯುವ ನೀರು ಬಿಡುಗಡೆಗೆ ನಿರ್ಧಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ(ಸೆ.22)ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರು ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಸೆ.20) ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀರಾವರಿ ಹಿತಾಸಕ್ತಿ ಹಾಗೂ ಕುಡಿಯುವ ನೀರು ಒದಗಿಸುವುದು ಈ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.


ಸಲಹಾ ಸಮಿತಿಯ ನಿರ್ಧಾರ ಆಧರಿಸಿ ಅಧಿಕಾರಿಗಳು ಆದೇಶ ಮಾಡಲಿದ್ದಾರೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರದಿಂದ ಹದಿನೈದು ದಿನಗಳವರೆಗೆ ನೀರು ಹರಿಸಲಾಗುವುದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂದು ತಿಳಿಸಿದರು.

ಶಾಸಕ ಎನ್.ಎಚ್.ಕೋನರೆಡ್ಡಿ, ಮಳೆ ಕೊರತೆಯಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಆದ್ದರಿಂದ ಜನರಿಗೆ ತೊಂದರೆಯಾಗದಂತೆ ನೀರು ಬಿಡಬೇಕಿದೆ. ನೀರಾವರಿಗೆ ಅಗತ್ಯವಿರುವ ನೀರು ಮೀಸಲಿಟ್ಟುಕೊಂಡು ಅಗತ್ಯತೆ ಆಧರಿಸಿ ಕುಡಿಯುವ ನೀರು ಬಿಡುಗಡೆಗೊಳಿಸಬೇಕು” ಎಂದು ಸಲಹೆ ನೀಡಿದರು.

ಬರಗಾಲ ಎಂದು ಘೋಷಿಸಿರುವುದರಿಂದ ಪರಿಸ್ಥಿತಿ ಆಧರಿಸಿ ಕುಡಿಯುವ ಉದ್ಧೇಶಕ್ಕಾಗಿಯೇ ಹಂತ ಹಂತವಾಗಿ ಬಿಡುಗಡೆಗೊಳಿಸಬಹುದು ಎಂದು ಶಾಸಕ ಕೋನರೆಡ್ಡಿ ಅಭಿಪ್ರಾಯಪಟ್ಟರು.

ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ತೀವ್ರವಾಗಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.
ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಕುಡಿಯುವ ನೀರು ಒದಗಿಸುವುದು ಅನಿವಾರ್ಯ. ಆದ್ದರಿಂದ ಅಗತ್ಯತೆ ಆಧರಿಸಿ ಸದ್ಯಕ್ಕೆ ನೀರು ಬಿಡುಗಡೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, “ಮುಂದಿನ ಜೂನ್ ಮಾಹೆಯವರೆಗಿನ ಲೆಕ್ಕಾಚಾರ ಇಟ್ಟುಕೊಂಡು ಜಲಾಶಯ ನೀರು ನಿರ್ವಹಣೆಯನ್ನು ಮಾಡಬೇಕಿದೆ. ಆದ್ದರಿಂದ ಸಲಹಾ ಸಮಿತಿಯು ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು” ಎಂದು ಹೇಳಿದರು.

ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ, ಜಿಲ್ಲಾ ಪೊಲೀಸ್ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -