ಉಡುಪಿ ಜಿಲ್ಲೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕುರ್ಮಾ ರಾವ್ ಎಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಸನ್ನ, ಪೋಲಿಸ್ ಅಧೀಕ್ಷಕ ಅಕ್ಷಯ್ ಹಾಕೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹಾಗೂ ಜಿಲ್ಲೆಯ ಎಲ್ಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.