spot_img
spot_img
spot_img
21.3 C
Belagavi
Sunday, October 1, 2023
spot_img

ಬೆಂಕಿ ಆಕಸ್ಮಿಕ: ತಕ್ಷಣ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಾರಿಹಾಳ ಗ್ರಾಮದಲ್ಲಿ ಬೆಂಕಿ ಆಕಸ್ಮಿಕದಿಂದ 2 ಮನೆಗಳು ಸುಟ್ಟು ಹೋಗಿದ್ದು, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಕ್ಷಣ ಸ್ಪಂದಿಸಿ, ಸಂತ್ರಸ್ತರ ನೆರವಿಗೆ ಮುಂದಾಗಿದ್ದಾರೆ.

ಗುರುಪುತ್ರ ಹಿರವಣ್ಣವರ ಹಾಗೂ ಸಿದ್ದಪ್ಪ ಹಿರವಣ್ಣವರ ಇವರ ಮನೆಗಳು ಆಕಸ್ಮಿಕ ಬೆಂಕಿ ಅನಾಹುತದಿಂದ ಸುಟ್ಟು, ಮನೆಯಲ್ಲಿದ್ದ ದಿನಬಳಕೆಯ ವಸ್ತುಗಳು, ಬಂಗಾರ, ಬೆಳ್ಳಿ ಧವಸ ಧಾನ್ಯಗಳು, ಕಾಗದ ಪತ್ರಗಳು ಸುಟ್ಟು ಹೋಗಿವೆ.

ಸುದ್ದಿ ತಿಳಿದ ಕೂಡಲೇ ಪುತ್ರ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ಸ್ಥಳಕ್ಕೆ ಕಳಿಸಿದ ಲಕ್ಷ್ಮೀ ಹೆಬ್ಬಾಳಕರ್, ಸಾಂತ್ವನ ಹೇಳಿದ್ದಲ್ಲದೆ ವಯಕ್ತಿಕವಾಗಿ ಹಾಗೂ ಸರಕಾರದಿಂದ ತಕ್ಷಣ ನೆರವು ನೀಡುವ ಭರವಸೆ ನೀಡಿದರು.
ಈ ಸಮಯದಲ್ಲಿ ಬಸವರಾಜ ಮ್ಯಾಗೋಟಿ, ಯುವರಾಜ ಕದಂ, ಈರಣ್ಣ ಹಿರವಣ್ಣವರ, ಗುಡದಪ್ಪ ಗೊರವ್, ಶಂಕರಗೌಡ ನಿರವಾಣಿ, ಗಿರಿಜಾ ಪಾಟೀಲ, ಗುರು ಅಕ್ಕತಂಗೇರಹಾಳ, ಬಾಳೇಶ್ ಕರವಿನಕೊಪ್ಪ, ಅಶೋಕ ಸಾಳುಂಕೆ, ಬಸವರಾಜ ಚೌಗುಲಾ ಹಾಗೂ ಮುಂತಾದವರು ಉಪಸ್ಥಿತರಿದ್ದರು.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -