spot_img
spot_img
spot_img
spot_img
spot_img
spot_img
spot_img
20.7 C
Belagavi
Monday, December 11, 2023
spot_img

ಸರ್ಕಾರದ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತಾಗಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾಮಾಜಿಕ ನ್ಯಾಯದ ಅಡಿಯಲ್ಲಿ, ಪ್ರತಿಯೊಬ್ಬ ನಾಗರೀಕರಿಗೂ ಅನುಕೂಲವಾಗುವಂತೆ ಸಾಮಾಜಿಕ ಕಳಕಳಿಯಿಂದ ಪ್ರತಿವರ್ಷ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಅಧಿಕಾರಿಗಳು ಜವಾಬ್ದಾರಿಯುತವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ, ವಿಕಲಚೇತನರು ಮತ್ತು ಹಿರಿಯ ನಾಗರೀಕರು ಸೇರಿದಂತೆ ಪ್ರತಿಯೊಬ್ಬರಿಗೂ ಈ ಯೋಜನೆಗಳನ್ನು ಅವರ ಮನೆಯ ಬಾಗಿಲಿಗೆ ತಲಪಿಸುವ ಕೆಲಸ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಹೇಳಿದರು.

 

ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಭಾನುವಾರ ನಡೆದ ರಾಷ್ಟೀಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಸಚಿವರು,

ರಾಜ್ಯದಲ್ಲಿರುವ ವಿಕಲಚೇತನರಲ್ಲಿ 6800 ಜನರಿಗೆ ವಿವಿಧ ದೈನಂದಿನ ಚಟುವಟಿಕೆಗಳನ್ನು ಕೈಗೊಳ್ಳಲು ವಾಹನಗಳ ಅವಶ್ಯಕತೆಯಿದ್ದು, ಈ ವರ್ಷ ಮೊದಲ ಹಂತದಲ್ಲಿ 3000 ಜನರಿಗೆ 30 ಕೋಟಿ ವೆಚ್ಚದಲ್ಲಿ ವಾಹನಗಳನ್ನು ವಿತರಿಸಲಾಗುವುದು ಉಳಿದವರಿಗೆ ಮುಂದಿನ ವರ್ಷ ನೀಡಲಾಗುವುದು , ವಿಕಲಚೇತನರು ದೈಹಿಕವಾಗಿ ದುರ್ಬಲರಾಗಿರಬಹುದು ಆದರೆ ಮಾನಸಿಕವಾಗಿ ಅವರು ಇತರರಿಗಿಂತ ಸದೃಢವಾಗಿರುತ್ತಾರೆ , ಇವರ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಸಾರ್ವಜನಿಕರ ಕುಂದು ಕೊರತೆ ಆಲಿಸಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಪ್ರತಿ ತಿಂಗಳ 25 ರಂದು ಜನತಾ ದರ್ಶನದ ಮೂಲಕ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕಾರ ಮಾಡಲಾಗುವುದು. ಸಾರ್ವಜನಿಕರು ತಮ್ಮ ಕುಂದಕೊರತೆಗಳನ್ನು ಜನತಾದರ್ಶನದ ಮೂಲಕ ಬಗೆಹರಿಸಿಕೊಳ್ಳುವಂತೆ ಸಚಿವರು ತಿಳಿಸಿದರು.

ಈ ವೇಳೆ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ , ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿ.ಪಂ. ಸಿಇಒ ಪ್ರಸನ್ನ ಹೆಚ್,ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಉಪವಿಭಾಗಧಿಕಾರಿ ರಶ್ಮಿ ಮತ್ತಿತರರು ಇದ್ದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -