ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅತಿದೊಡ್ಡದಾದ ‘ಗೃಹಲಕ್ಷ್ಮಿ’ ಯೋಜನೆಯ ಸೌಲಭ್ಯಗಳ ವಿತರಣಾ ಸಮಾರಂಭ ಅದ್ಧೂರಿ ಯಾಗಿ, ಯಶಸ್ವಿಯಾಗಿ ಸಂಪನ್ನಗೊಂಡ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಮಾರಂಭದ ಅಂತ್ಯದಲ್ಲಿ ವೇದಿಕೆಯ ಮೇಲೆ ಹೂಗುಚ್ಛ ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸಿದರು.