spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡಗಳಿಗೆ ನಿವೇಶನ ಗುರುತಿಸಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ

ಬೆಂಗಳೂರು: ನಗರ ಪ್ರದೇಶಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಅಗತ್ಯ ನಿವೇಶನಗಳನ್ನು ಗುರುತಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಶೇಷಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಒ ಗಳಿಗೆ ಸೂಚಿಸಿದರು.

ವಿಧಾನಸೌಧದ ಸಭಾಂಗಣ ಕೊಠಡಿಯಲ್ಲಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನಗರ ಪ್ರದೇಶದಲ್ಲಿ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನದ ಕೊರತೆ ಇದೆ. ಸರ್ಕಾರಿ‌ ಪ್ರಾಥಮಿಕ ಶಾಲೆಗಳು, ಸರ್ಕಾರದ ಸಮುದಾಯ ಭವನಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲು ಅನುಮತಿ ನೀಡಬೇಕೆಂದು ಸಚಿವರು ಮುಖ್ಯಮಂತ್ರಿ ಬಳಿ ಮನವಿ ಮಾಡಿದರು.

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳನ್ನು ಶೀಘ್ರದಲ್ಲೇ ತುಂಬಲಾಗುವುದು ಎಂದು ಹೆಬ್ಬಾಳಕರ್ ತಿಳಿಸಿದರು.

ಕೃತಜ್ಞತೆ ಸಲ್ಲಿಕೆ: ಮೈಸೂರಿನಲ್ಲಿ ಆಗಸ್ಟ್ 30 ರಂದು ನಡೆದ ‘ಗೃಹಲಕ್ಷ್ಮಿ’ ಯೋಜನೆಯ ಸೌಲಭ್ಯಗಳ ವಿತರಣೆ ಸಮಾರಂಭದ ಯಶಸ್ಸಿಗೆ ಸಹಕರಿಸಿದ ಸಚಿವ ಸಂಪುಟದ ಸಹೋದ್ಯೋಗಿಗಳು, ಶಾಸಕರು ಹಾಗೂ ಅಧಿಕಾರಿಗಳಿಗೆ ಸಚಿವರು ಈ ವೇಳೆ ಧನ್ಯವಾದ ಅರ್ಪಿಸಿದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -