ಬೆಂಗಳೂರು: ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನು ಶೀಘ್ರವೇ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಆರೋಗ್ಯ ಇಲಾಖೆಯ ಇ-ಸರ್ವೇ ಕೆಲಸದಿಂದ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ನಿಯೋಗ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು…ಇದೇ ವೇಳೆ ಮಾತನಾಡಿದ ಸಚಿವರು, ಈ ಕುರಿತು ಆರೋಗ್ಯ ಸಚಿವರೊಂದಿಗೆ ಮಾತುಕತೆ ನಡೆಸುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು..ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡಲಾಗುವುದು ಎಂದರು. ಇದೇ ವೇಳೆ ಅಂಗನವಾಡಿ ಕಾರ್ಯಕರ್ತೆಯರ ರಾಜ್ಯಾಧ್ಯಕ್ಷರಾದ ಅಮ್ಜದ್, ಪ್ರಧಾನ ಕಾರ್ಯದರ್ಶಿ ಜಯಮ್ಮ, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜ ಉಪಸ್ಥಿತರಿದ್ದರು..