spot_img
22.9 C
Belagavi
Saturday, December 3, 2022
spot_img

ಬಾದಾಮಿ, ರಾಯಚೂರು ಸೇರಿ ರಾಜ್ಯದ ಐದು ಕಡೆ ವಿಮಾನ ನಿಲ್ದಾಣ ಸ್ಥಾಪನೆ : ಸಚಿವ ನಿರಾಣಿ

ಹುಬ್ಬಳ್ಳಿ : ಬಾದಾಮಿ, ರಾಯಚೂರು ಸೇರಿದಂತೆ ರಾಜ್ಯದ ಐದು ಕಡೆ 18 ತಿಂಗಳಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಾದಾಮಿ, ರಾಯಚೂರು, ದಾವಣಗೆರೆ, ಚಿಕ್ಕಮಗಳೂರು, ಕೊಪ್ಪಳದಲ್ಲಿ ಮುಂಬರುವ 18 ತಿಂಗಳಲ್ಲಿ ವಿಮಾನ ನಿಲ್ದಾಣ ಸ್ಥಾಪಿಸಲಾಗುವುದು.

ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾರಂಭಿಸುವ ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದ ಎಸ್ಸಿ, ಎಸ್ ಟಿ ಜನಾಂಗದವರಿಗೆ ಕೈಗಾರಿಕೆ ಸ್ಥಾಪಿಸಲು ಶೇ. 75 ರಷ್ಟು ಸಬ್ಸಿಡಿಯನ್ನು ಇತರ ಅತ್ಯಂತ ಹಿಂದುಳಿದ ಸಮುದಾಯಗಳಿಗೆ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗಿದೆ ಎಂದರು.

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -