spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಬಜೆಟ್‌ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗೆ ಅನುದಾನ ಕೊಟ್ಟು, ಹೊಸ ಯೋಜನೆ ಘೋಷಣೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಈ ಬಾರಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗೆ ಅನುದಾನ ಕೊಟ್ಟು, ಹೊಸ ಯೋಜನೆ ಘೋಷಣೆ ಮಾಡಿದ್ದಾರೆ. ಬಜೆಟ್‌ ಬಗ್ಗೆ ವಿಕ್ಷಪದವರಿಂದ ಟೀಕೆ ಸ್ವಾಭಾವಿಕ. ಆದರೆ ಬಜೆಟ್ ಬಗ್ಗೆ ಜನ ಸಾಮಾನ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಮಾಡುವುದಕ್ಕಾಗಿ ವಿಪಕ್ಷದವರು ವಿರೋಧ ಮಾಡುತ್ತಾರೆ. ವಿಪಕ್ಷದವರ ಟೀಕೆಗೆ ಮಹತ್ವ ಕೊಡಬೇಕಿಲ್ಲ.ಈ ಬಜೆಟ್ ಸರ್ಕಾರಕ್ಕೆ, ಪಕ್ಷಕ್ಕೆ ಅನುಕೂಲ ಆಗಲಿದೆ ಎಂದ ಅವರು, ಕಷ್ಟಕಾಲದಲ್ಲಿಯೂ ಸುಮಾರು 30 ಸಾವಿರ ಗೃಹಲಕ್ಷ್ಮಿಗೆ, 10 ಸಾವಿರ ವಿದ್ಯುತ್‌ ಗೆ, 10 ಸಾವಿರ ಅಕ್ಕಿ ಯೋಜನೆಗೆ, 4 ಸಾವಿರ ಸಾರಿಗೆಗೆ ಕೊಟ್ಟು ಯಾವುದೇ ಯೋಜನೆ ಕಡಿತಗೊಳಿಸದೆ ಒಂದಿಷ್ಟು ಹೊಸ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಭ್ರಮೆಯಲ್ಲಿದೆ ಬಿಜೆಪಿ: ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದ ಐದು ಯೋಜನೆಗಳು ಜಾರಿಗೆಯಾಗುವದಿಲ್ಲವೆಂದು ಬಿಜೆಪಿಯವರು ಬೀದಿ ಬೀದಿಗಿಳಿದು ಹೋರಾಟ ಮಾಡಬೆಕೇಂದು ಸದನದ ಒಳಗೆ ಹಾಗೂ ಹೊರಗೆ ತಯಾರಿ ನಡೆಸಬೇಕೆಂದು ಭ್ರಮೆಯಲ್ಲಿದೆ. ಆದರೆ ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆದು ಎಲ್ಲ ಯೋಜನೆಗಳನ್ನು ಜಾರಿ ಮಾಡಿ ರಾಜ್ಯದ ಜನರ ಮನ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.

ಅಬಕಾರಿ ಸುಂಕ ಹೆಚ್ಚಳ ಕುಡುಕರ ಆಕ್ರೋಶ ವಿಚಾರಕ್ಕೆ ಉತ್ತರಿಸಿ ಅದು ಒಂದೇ ಇಲಾಖೆಯಲ್ಲಿ ಪ್ರತಿಭಟನೆ ಮಾಡುವುದಿಲ್ಲ. ಅದು ವಿಚಿತ್ರ ಇಲಾಖೆ, ಈ ಬಾರಿ ಇಪ್ಪತ್ತು ಪರ್ಸಂಟ್ ಮಾಡಿದ್ದಾರೆ. ಬೇರೆ ರಾಜ್ಯಕ್ಕೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಕಡಿಮೆ ಇದೆ. 100 ರಷ್ಟು ಹೆಚ್ಚಳ ಮಾಡಿದರೂ ಏನು ಆಗಲ್ಲ ಎಂದರು.

ಲೋಕೋಪಯೋಗಿ ಇಲಾಖೆಗೆ 10.143 ಕೋಟಿ ರೂ.:ಈ ಭಾರಿ ಮಂಡಿಸಿದ ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ 10.143 ಕೋಟಿ ರೂ. ನೀಡಲಾಗಿದೆ. ಅಲ್ಲದೇ ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ , ರೈತರಿಗೆ ನೀಡಲಾಗುತ್ತಿರುವ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ರೂ. 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಹಾಗೂ ದೀರ್ಘಾವಧಿ ಸಾಲ ರೂ. 10 ಲಕ್ಷದಿಂದ 15 ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ. ಕೃಷಿ ಭಾಗ್ಯ ಯೋಜನೆಯಡಿ ನರೇಗಾ ಯೋಜನೆಗೆ ರೂ.10 ಕೋಟಿ ಅನುದಾನ, ಇಂದಿರಾ ಕ್ಯಾಂಟೀನ್ ಗೆ ರೂ. 100 ಕೋಟಿ ಅನುದಾನ ಸೇರಿದಂತೆ ನೀರಾವರೀ ಯೋಜನೆಗಳಿಗೆ ಮಹತ್ವ ನೀಡಲಾಗಿದೆ ಎಂದ ಹೇಳಿದರು.

ಚಿಕ್ಕೋಡಿಯಲ್ಲಿ ಜೈನ ಮುನಿ‌ ಕೊಲೆ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಆರೋಪಿಗಳು ಸಿಕ್ಕಿದ್ದಾರೆ. ವೈಯಕ್ತಿಕ ವಿಚಾರಕ್ಕೆ ಕೊಲೆಯಾಗಿದೆ ಅಂತಾ ಪೊಲೀಸರು ಹೇಳಿದ್ದಾರೆ. ಯಾವ ಕಾರಣಕ್ಕೆ ಕೊಲೆ ಆಗಿದೆ ಅಂತಾ ಇನ್ನೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಹೇಳಿದರು.
ಈ ವೇಳೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಾಂಗ್ರೆಸ್‌ ಮುಖಂಡ ಮಹಾವೀರ ಮೋಹಿತೆ, ವಿವೇಕ ಜತ್ತಿ, ರಾಜೇಂದ್ರ ಪಾಟೀಲ ಇದ್ದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -