ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ್ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯು ತೀವ್ರ ನೋವು ತಂದಿದೆ ಎಂದು ಲೋಕೋಪಯೋಗಿ ಇಲಾಖೆ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ಜೈನ್ ಮುನಿ ಕಾಮಕುಮಾರ ನಂದಿ ಮಹಾರಾಜರರ ಹತ್ಯೆಯು ಜನತೆಯಲ್ಲಿಯೂ ನೋವು ತರಿಸಿದೆ. ಈ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಜೈನ್ ಮುನಿಗಳ ಹತ್ಯೆಯಿಂದ ನನಗೂ ಆಘಾತವಾಗಿದೆ ಎಂದು ತಿಳಿಸಿದ್ದಾರೆ.