spot_img
spot_img
spot_img
spot_img
spot_img
spot_img
spot_img
20.7 C
Belagavi
Monday, December 11, 2023
spot_img

ಬೆಳಗಾವಿಯಲ್ಲಿ ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ:ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಹುದಲಿಯ ಬೆಳಗಾಂ ಶುಗರ್ಸ್ ಪ್ರೈ.ಲಿಮಿಟಡ್ ಮೋಡ ಬಿತ್ತನೆಗೆ ಮುಂದಾಗಿದ್ದು, ಮೋಡ ಬಿತ್ತನೆ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಚಾಲನೆ ನೀಡಿದರು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ(ಸೆ.29) ಮೋಡ ಬಿತ್ತನೆ ಕಾರ್ಯಕ್ಕೆ ಚಾಲನೆ ನೀಡಿದರು. ಮೋಡ ಬಿತ್ತನೆ ಕಾರ್ಯಕ್ಕೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮಹಾನಿರ್ದೇಶಕರ(ಡಿಜಿಸಿಎ) ಕಚೇರಿಯು ಗ್ರೀನ್ ಸಿಗ್ನಲ್ ನೀಡಿದೆ.

ಸೆ.29 ಹಾಗೂ 30 ರಂದು ಎರಡು ದಿನಗಳ ಕಾಲ ಬೆಳಗಾವಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯ ನಡೆಯಲಿದೆ. ಕ್ಯಾಪ್ಟನ್ ವೀರೇಂದ್ರ ಸಿಂಗ್ ಹಾಗೂ ಕ್ಯಾಪ್ಟನ್ ಆದರ್ಶ ಪಾಂಡೆ ನೇತೃತ್ವದಲ್ಲಿ ವಿಟಿ-ಕೆಸಿಎಂ ವಿಮಾನವು ಮೋಡ ಬಿತ್ತನೆ ಮಾಡಲಿದೆ.

ಕಡಿಮೆ ಎತ್ತರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಎಸಿಎಲ್-2 ಅಯೋಡೈಡ್ ಹಾಗೂ 20 ಸಾವಿರ ಅಡಿ ಮೇಲೆ ಎತ್ತದರದಲ್ಲಿರುವ ಮೋಡಗಳ ಆಕರ್ಷಣೆಗೆ ಸಿಲ್ವರ್ ಐಯೋಡೈಡ್ ರಾಸಾಯನಿಕ ಸಿಂಪಡಿಸಲಾಗುತ್ತದೆ.

ಒಂದು ವೇಳೆ ನಿರ್ದಿಷ್ಟ ಪ್ರದೇಶದ ವ್ಯಾಪ್ತಿಯಲ್ಲಿ ಮೋಡಗಳು ಇದ್ದರೆ ರಾಸಾಯನಿಕ ಸಿಂಪಡಣೆ ಮಾಡಿದ ಐದು ನಿಮಿಷಗಳಲ್ಲಿ ಮಳೆ ಬರಬಹುದು.
ಒಂದು ವೇಳೆ ಮೋಡಗಳು ಇರದಿದ್ದಲ್ಲಿ ಹಾಗೇ ಹಿಂದಿರುಗಲಾಗುತ್ತದೆ ಎಂದು ಮೋಡ ಬಿತ್ತನೆ ವಿಮಾನದ ತಾಂತ್ರಿಕ ಸಿಬ್ಬಂದಿ ತಿಳಿಸಿದರು.
ಬೆಳಗಾವಿಯಲ್ಲಿ ಮೋಡಗಳು ಕಂಡುಬಂದಿರುವುದರಿಂದ ಮೋಡ ಬಿತ್ತನೆಗೆ ಪೂರಕ ವಾತಾವರಣವಿದೆ ಎಂದು ಹೇಳಿದರು.

5 ರಿಂದ 10 ಸಾವಿರ ಅಡಿಗಳ ಮೇಲೆ ಮೋಡಗಳನ್ನು ಆಕರ್ಷಿಸಲು ಸಿಲ್ವರ್ ಐಯೋಡೈಡ್ ರಾಸಾಯನಿಕವನ್ನು ಆಗಸದಲ್ಲಿ ಸಿಂಪಡಣೆ ಮಾಡಲಾಗುತ್ತದೆ ಎಂದು ಸಂಸ್ಥೆಯ ಅಧಿಕಾರಿಗಳು ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಶಾಸಕ ಆಸಿಫ್ ಸೇಠ್, ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ, ರಾಹುಲ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -