spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ಜನತೆಯಿಟ್ಟ ವಿಶ್ವಾಸಕ್ಕೆ ಚಿರಋಣಿ: ಸಚಿವ ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ಉಳ್ಳಾಗಡ್ಡಿ ಖಾನಾಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿರುವ ಸಮಸ್ಯೆಗಳ ಕುರಿತು ಶೀಘ್ರವೇ ಅಭಿವೃದ್ಧಿ ಎಂಬ ಬೆಳಕು ಚೆಲ್ಲುವ ಕೆಲಸ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಯಮಕನಮರಡಿ ಮತಕ್ಷೇತ್ರದ ಉಳ್ಳಾಗಡ್ಡಿ ಖಾನಾಪುರದಲ್ಲಿ ನಡೆದ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮೆಲ್ಲರ ಆಶೀರ್ವಾದಿಂದ ಈ ಭಾರಿ ಬಹಳ ಅಂತರದಿಂದ ವಿಜಯಶಾಲಿಯಾಗಿದ್ದೇವೆ. ನಿವೇಲ್ಲಾ ಇಟ್ಟ ಭರವಸೆಯನ್ನು ಶೀಘ್ರವೇ ಈಡೇರಿಸಲಾವುದು ಎಂದು ಹೇಳಿದರು.

ಕುಡಿಯುವ ನೀರಿನ ಸಮಸ್ಯೆ ಶೀಘ್ರ ಕಡಿವಾಣ: ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಶೀಘ್ರವೇ ಈ ಸಮಸ್ಯೆಗೆ ಕಡಿವಾಣ ಹಾಕಿ ಗ್ರಾಮಸ್ಥರ ಸುರಕ್ಷಿತದತ್ತ ಗಮನ ಹರಿಸಲಗುವುದು. ಇಲ್ಲಿನ ಜನರ ಕಳೆದ 8 ವರ್ಷಗಳಿಂದ ನನ್ನ ಮೇಲೆ ಭರವಸೆಯಿಟ್ಟು ನನ್ನನ್ನೇ ಗೆಲ್ಲಿಸುತ್ತಾ ಬಂದಿದ್ದಿರಿ. ಈ ನಿಮ್ಮ ವಿಶ್ವಾಸಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು.

ನಂತರ ಚಿಕ್ಕಾಲಗುಡ್ಡ ಗ್ರಾಮದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು ಇವುಗಳ ಪ್ರಗತಿಗೆ ಆಧ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.

ಗ್ರಾಮೀಣ ಪ್ರದೇಶದ ಜನತೆ ಕೃಷಿ ಪತ್ತಿನ ಸಹಕಾರ ಸಂಘಗಳು ತುಂಬ ಅನುಕೂಲವಾಗಿವೆ. ಇವುಗಳನ್ನು ಸಾಲ ಪಡೆದುಕೊಂಡು ಕೃಷಿ ಚಟುವಟಿಕೆಗೆ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬಹದು ಎಂದು ಹೇಳಿದರು.

ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ಇದ್ದರೂ ಸಹ ರೈತರು ಇದನ್ನೇ ಅವಲಂಭಿಸಿದ್ದಾರೆ. ಸರಕಾರ ಕೂಡ ಅವರಿಗೆ ಶೂನ್ಯ ಬಡ್ಡಿ ದರಲ್ಲಿ ಸಾಲ ದೊರೆಯುತ್ತದೆ. ಇದನ್ನು ಸಂಪೂರ್ಣವಾಗಿ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ರೈತರು ಖಾಸಗಿ ವ್ಯಕ್ತಿಗಳಿಂದ ಹೆಚ್ಚಿನ ಬಡ್ಡಿ ದರದಲ್ಲಿ ಯಾವುದೇ ಕಾರಣಕ್ಕೂ ಸಾಲ ಪಡೆದುಕೊಳ್ಳಬಾರದು. ಇದಲ್ಲದೇ ಸಾಲಕ್ಕೆ ಹೆದರಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಹೇಳಿದರು.

ಇದೇ ವೇಳೆ ಲೋಕೋಪಯೊಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ವತಿಯಿಂದ ಸನ್ಮಾನ ಮಾಡಲಾಯಿತು. ಈ ವೇಳೆ ಯುವ ನಾಯಕ್‌ ರಾಹುಲ್‌ ಜಾರಕಿಹೊಳಿ ಸೇರಿದಂತೆ ಚಿಕ್ಕಾಲಗುಡ್ಡಪಿಕೆಪಿಎಸ್‌ ಸದಸ್ಯರು ಹಾಗೂ ಉಳ್ಳಾಗಡ್ಡಿ ಖಾನಾಪುರದ ಕಾಂಗ್ರೆಸ್‌ ಮುಖಂಡರು ಸೇರಿದಂತೆ ಇತರರು ಇದ್ದರು.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -