ಬೆಳಗಾವಿ: ಬಿಜೆಪಿಯವರು ಸರ್ಕಾರ ಉರುಳಿಸುವ ತಂತ್ರ ಮಾಡುತ್ತಿರುವದು ನಿಜ ಇದ್ದರೂ ಇರಬದುದು, ಅಥವಾ ಇಲ್ಲದೇ ಇರಬಹುದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ನೋಡಿಕೊಳ್ಳುತ್ತಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಸರ್ಕಾರ ಉರುಳಿಸುವ ತಂತ್ರದ ವಿಚಾರವಾಗಿ ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶಾದ್ಯಂತ ಜನರಿಂದ ಆಯ್ಕೆ ಆದ ಸರ್ಕಾರ ಉರುಳಿಸುವುದರಲ್ಲಿ ಪರಿಣಿತರಗಿದ್ದಾರೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ. ಬೇರೆ ಬೇರೆ ರಾಜ್ಯದಲ್ಲಿ ಅನೇಕ ಸರ್ಕಾರ ಪತನಗೊಳಿಸಿದ್ದಾರೆ. ಹಾಗಾಗಿ ನಾವು ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.