spot_img
spot_img
spot_img
28.1 C
Belagavi
Thursday, September 29, 2022
spot_img

ಶೀಘ್ರವೇ ತಳವಾರ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ : ಸಚಿವ ಶ್ರೀರಾಮುಲು 

spot_img

ಬೆಂಗಳೂರು: ಕೇಂದ್ರ ಸರ್ಕಾರವು ತಳವಾರ ಪಂಗಡದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ಪ್ರವರ್ಗ-1ರಲ್ಲಿಯೇ ಉಳಿಸಿತ್ತು. ಇದೀಗ ಈ ಪಟ್ಟಿಯಿಂದ ತೆಗೆದು ಎಸ್ಟಿ ಪಟ್ಟಿಗೆ ಸೇರ್ಪಡೆಯನ್ನು ಶೀಘ್ರ ಮಾಡಲಾಗುತ್ತದೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಈ ಕುರಿತು ಸಚಿವ ಬಿ.ಶ್ರೀರಾಮುಲು ಮಾತನಾಡಿ, ಕಳೆದ ವಿಧಾನ ಮಂಡಲ ಅಧಿವೇಶನದಲ್ಲಿ ಪರಿಷತ್ ಸದಸ್ಯ ಡಾ. ಸಾಬಣ್ಣ ತಳವಾರ ಅವರು ಕೇಳಿದಂತ ಚುಕ್ಕೆಗುರುತಿನ ಪ್ರಶ್ನೆಗೆ ಸರ್ಕಾರದಿಂದ ತಡವಾಗಿ ಉತ್ತರ ನೀಡಲಾಗಿದೆ. ಆ ಪ್ರಕಾರವಾಗಿ ತಳವಾರ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಡುವ ಬಗ್ಗೆ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆ ವತಿಯಿಂದ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ತಳವಾರ ಸಮುದಾಯವನ್ನು ಎಸ್ಟಿಗೆ ಸೇರ್ಪಡೆಗೊಳಿಸಿದ್ದರೂ ಈವರೆಗೂ ಜಾತಿ ಪ್ರಮಾಣ ಪತ್ರ ನೀಡಿಲ್ಲ. ಹೀಗಾಗಿ ಶೀಘ್ರವೇ ಎಸ್ಟಿ ಜಾತಿ ಪ್ರಮಾಣ ಪತ್ರವನ್ನು, ನಿಗದಿತ ಅವಧಿಯೊಳಗೆ ನೀಡುವಂತೆ ಪ್ರಾಧಿಕಾರಗಳಿಗೆ ಸೂಚಿಸಲಾಗುತ್ತದೆ ಎಂದರು.

spot_img

Related News

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು ಹಾವೇರಿಯ ಗುರುಭವನದಲ್ಲಿ ಹಾವೇರಿ...

ಮೋದಿ ಅವರ ನೇತೃತ್ವದಲ್ಲಿ 150 ಸ್ಥಾನಗಳ ಗೆಲುವ ಪಣ : ಯಡಿಯೂರಪ್ಪ 

ಶಿವಮೊಗ್ಗ: ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣ ಹೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರ ನೇತೃತ್ವದಲ್ಲಿ ದೇಶ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -