spot_img
spot_img
spot_img
24 C
Belagavi
Thursday, June 1, 2023
spot_img

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಬೆನಕೆ

ಬೆಳಗಾವಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಬೆಳಗಾವಿ, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳಗಾವಿ (ದ) ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಾಲನೆ ನೀಡಿದರು.

ಬೆಳಗಾವಿ ನಗರದ ಕನ್ನಡ ಮಾದ್ಯಮ ಪ್ರೌಢ ಶಾಲೆ, ಮಹಾಂತೇಶ ನಗರ (ಮಹಾಂತ ಭವನ) ಬೆಳಗಾವಿಯಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಸಕರು ವಿದ್ಯಾರ್ಥಿಗಳಿಗೆ ತಮ್ಮ ತಂದೆ ತಾಯಿ ಮೊದಲ ಗುರುಗಳಾದರೆ ನಂತರದ ಸ್ಥಾನದಲ್ಲಿ ಶಿಕ್ಷಕರು, ಆದ್ದರಿಂದ ಅವರ ಆಶಿರ್ವಾದ ಹಾಗೂ ಸಲಹೆ ಸೂಚನೆಗಳನ್ನು ಪಡೆದುಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ನಿಮ್ಮ ಪ್ರತಿಭೆಗಳನ್ನು ಮುಖ್ಯ ವಾಹಿನಿಗೆ ತರಬೇಕೆಂದೆರೆ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಲ್ಲಿ ಭಾಗವಿಹಿಸುವುದು ಅತ್ಯಂತ ಅವಶ್ಯಕವಾಗಿದೆ ಆದ್ದರಿಂದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚೆಚ್ಚು ಭಾಗವಹಿಸಬೇಕೆಂದರು. ತಂದೆ ತಾಯಿ ಹಾಗೂ ಶಿಕ್ಷಕರ ಆಶಿರ್ವಾದ ಇರದೆ ಹೊದರೆ ನಿಮ್ಮ ಜೀವನ ವ್ಯರ್ಥವೆಂದು ಕಿವಿಮಾತುಗಳನ್ನು ಹೇಳಿದರು. ಎಲ್ಲರೂ ಜಾತಿ ಮತ ಬೇದ ಮರೆತು ಒಗ್ಗಟ್ಟಾಗಿ

ಈ ಸಂದರ್ಭದಲ್ಲಿ ನಗರ ಸೇವಕರಾದ ರಾಜಶೇಖರ ಡೋಣ , ಮಹಾದೇವ ರಾಠೋಡ, ಬಸವರಾಜ ಎಂ. ನಲತವಾಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು (ಆಡಳಿತ), ಆರ. ಪಿ. ಜುಟ್ಟನ್ನವರ ಉಪ ನಿರ್ದೇಶಕರು (ಅಭಿವೃಧ್ದಿ) ಡಯಟ್ ಮನ್ನೂರು, ಭಿಮಪ್ಪ ಲಾಳಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ (ಆಡಳಿತ), ರವಿ ಭಜಂತ್ರಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಲೀಲಾವತಿ ಹಿರೇಮಠ, ಪ್ರೌಢ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಎಸ್. ಎಮ್. ಪಾಟೀಲ, ಪ್ರಧಾನ ಕಾರ್ಯದರ್ಶಿ ಎ.ಎಸ್. ಖೋತ, ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಜಯಕುಮಾರ ಹೆಬಳಿ, ಸಿಬ್ಬಂದಿ ವರ್ಗ ಹಾಗೂ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -