ಬೆಳಗಾವಿ : ದಿನಾಂಕ 05.03.2022 ರಂದು ಅಂಗವಿಕಲರಿಗೆ ಬೆಳಗಾವಿ ಮಹಾನಗರ ಪಾಲಿಕೆಯ ಶೇ. 5% ಯೋಜನೆಯಡಿ ಅಂಗವಿಕಲರಿಗೆ ತ್ರಿ-ಚಕ್ರ ವಾಹನಗಳನ್ನು ಇಂದು ಮಹಾನಗರ ಪಾಲಿಕೆಯ ಆವರಣದಲ್ಲಿ ಉತ್ತರ ಮತಕ್ಷೇತ್ರ ವ್ಯಾಪ್ತಿಯ ಫಲಾನುಭವಿಗಳಿಗೆ ಬೆಳಗಾವಿಯ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಪಲಾನುಭವಿಗಳಿಗೆ ಹಂಚಿಕೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ತ್ರ್ರಿ-ಚಕ್ರ ವಾಹನಗಳನ್ನು ವಿತರಿಸಿ ಮಾತನಾಡಿದ ಶಾಸಕರು ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿನ ಅಂಗವಿಕಲರಿಗೆ ಮಹಾನಗರ ಪಾಲಿಕೆಯ ಶೇ. 5% ಯೋಜನೆಯಡಿ ತ್ರಿ-ಚಕ್ರ ವಾಹನಗಳನ್ನು ವಿತರಿಸಲಾಗಿದ್ದು, ಫಲಾನುಭವಿಗಳು ತ್ರಿ-ಚಕ್ರ ವಾಹನಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಸರಳ ಜೀವನವನ್ನು ನಡೆಸಿಕೊಂಡು ಹೋಗಬೇಕು ಹಾಗೂ ಅಂಗವಿಕಲರು ಛಲ ಬಿಡದೆ ಸ್ವಯಂ ಉದ್ಯೋಗವನ್ನು ಹೊಂದಿ ಸ್ವಾವಲಂಭಿಗಳಾಗಿ ಪ್ರೋತ್ಸಾಹಿಸಲು ಸರ್ಕಾರದಿಂದ ತ್ರ-ಚಕ್ರ ವಾಹನಗಳನ್ನು ವಿತರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಫಲಾನುಭವಿಗಳು ಶಾಸಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಘಾಳಿ, ಪಾಲಿಕೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.