spot_img
spot_img
spot_img
18.5 C
Belagavi
Thursday, September 29, 2022
spot_img

ಕಲಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದ ಶಾಸಕ ಬೆನಕೆ

spot_img

ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಳಗಾವಿಯ ಮಹಾಂತೇಶ ನಗರದಲ್ಲಿನ ಅನುಭವ ಮಂಟಪ (ಗ್ಲಾಸ್ ಹೌಸ್ ಗ್ಯಾಲರಿ) ನಲ್ಲಿ ವಿಜಯ ಕಾಲೇಜ ಆಪ್ ಪೈನ್ ಆಟ್ರ್ಸ ಇವರು ಏರ್ಪಡಿಸಿರುವ ಕಲಾ ಪ್ರದರ್ಶನ ಕಾರ್ಯಕ್ರಮವನ್ನು ಇಂದು ನಗರ ಸೇವಕ ರಾಜಶೇಖರ ಡೋಣಿ ಇವರ ಅಧ್ಯಕ್ಷತೆಯಲ್ಲಿ ಉದ್ಘಾಟನೆಯನ್ನು ಮಾಡಿದರು.

ಕಲಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ವಿಜಯ ಕಾಲೇಜ ಆಪ್ ಪೈನ್ ಆಟ್ರ್ಸ ವಿದ್ಯಾರ್ಥಿಗಳು ಅತ್ಯಂತ ಸುಂದರವಾಗಿ ತಮ್ಮ ಕೌಶಲ್ಯವನ್ನು ಅತ್ಯುತ್ತವಾದ ಚಿತ್ರಗಳನ್ನು ಬಿಡಿಸುವುದರ ಮೂಲಕ ಈ ಕಲಾ ಪ್ರದರ್ಶನಕ್ಕೆ ಮೆರಗನ್ನು ನೀಡಿದ್ದಾರೆ ಎಂದ ಅವರು ಸುಂದರವಾದ ಕಲಾ ಪ್ರದರ್ಶನವನ್ನು ಆಯೋಜಿಸಿರುವ ಕಾಲೇಜು ಆಡಳಿತ ಮಂಡಳಿಯವರಿಗೆ ಧನ್ಯವಾದಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಸೇವಕ ರಾಜಶೇಖರ ಡೋಣಿ, ಪ್ರಾಚಾರ್ಯರಾದ ಡಾ. ಸಿ.ವಿ. ಬಡಿಗೇರ, ಉಪನ್ಯಾಸಕರಾದ ಎಸ್. ವಿ. ಗುಂಜಲ, ಸಂತೋಷ ಅಕ್ಕಿ, ಬಿ.ಸಿ. ಕುಟ್ನಿ, ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -