ಬೆಳಗಾವಿ: ಕುಮಾರ ಗಂಧರ್ವ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾ ಘಟಕ ಬೆಳಗಾವಿ (ರಿ) ಇದರ ಉದ್ಘಾಟನೆಯ ಸಮಾರಂಭದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿಯಾಗಿದ್ದರು.
ಈ ಸಮಯದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರುಗಳಾದ ಪ್ರಕಾಶ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಅಧ್ಯಕ್ಷರಾದ ಬಸಪ್ಪ ತಳವಾರ, ಡಾ. ಶಿವಣ್ಣ ಎನ್ ಕೆ ಹಾಗೂ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.