ಬಾಗಲಕೋಟೆ: ಮೀಸಲಾತಿ ಬಗ್ಗೆ ಶಾಸಕರೊಬ್ಬರ ವಿವಾದಾತ್ಮಕ ಹೇಳಿಕೆ ವಿಡಿಯೋ ವೈರಲ್ ಆಗಿದೆ. ಜಮಖಂಡಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಜಮಖಂಡಿ ಬಿಜೆಪಿ ಶಾಸಕ ಜಗದೀಶ್ “ಕುಲಕುಲವೆಂದು ಬಡಿದಾಡದಿರಿ ಎಂದು ಕನಕದಾಸರು ಹೇಳಿದ್ದಾರೆ. ‘
ಕುಲಕುಲವೆಂದು ಬಡಿದಾಡದಿರಿ, ಕುಲದ ನೆಲೆಯನ್ನೇನಾದ್ರೂ ಬಲ್ಲಿರಾ? ಹಾಗೇ ನೋಡಿದರೆ ಕುಲ ಎನ್ನುವುದು ಇಲ್ಲವೇ ಇಲ್ಲ. ಏನಾದರು ಸಿಗುತ್ತೆ ಅಂತ ಮೀಸಲಾತಿ ಸಂಬಂಧ ಬಡಿದಾಟ ನಡೀತಿದೆ. ಮೀಸಲಾತಿ ತೆಗೆಯಿರಿ, ಎಲ್ಲರೂ ಟಾಪ್ ಕ್ಲಾಸ್ನಲ್ಲಿ ಬಂದುಬಿಡುತ್ತೀರಾ” ಎಂದು ಹೇಳಿದ್ದಾರೆ. ಶಾಸಕ ಜಗದೀಶ್ ಹೇಳಿಕೆಯನ್ನು ದಲಿತಪರ ಸಂಘಟನೆ ಖಂಡಿಸಿದೆ. ಸಂಘಟನೆ ಕಾರ್ಯಕರ್ತರು ರಾತ್ರೋರಾತ್ರಿ ಬಿಜೆಪಿ ಶಾಸಕ ಜಗದೀಶ್ ಮನೆಗೆ ಮುತ್ತಿಗೆಗೆ ಯತ್ನಿಸಿದರು. ಜಮಖಂಡಿಯಲ್ಲಿ ಪ್ರತಿಭಟನೆ ನಡೆಸಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರು ಮತ್ತು ಪೊಲೀಸರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....