spot_img
spot_img
spot_img
32.1 C
Belagavi
Tuesday, June 6, 2023
spot_img

ಕುಸ್ತಿಪಟು ಲಕ್ಷ್ಮೀ ಪಾಟೀಲ್ ಗೆ ಶುಭ ಹಾರೈಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ: ಆಗಸ್ಟ್ 24 ರಿಂದ 27 ರವರೆಗೆ ಹರಿಯಾಣದಲ್ಲಿ ನಡೆಯಲಿರುವ ಫೆಡರೇಷನ್ ಕಪ್ – ಹರಿಯಾಣ ರೋತಕ್ 2022 ರ 54 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸಲು ತೆರಳುತ್ತಿರುವ ಹಲಗಾ ಬಸ್ತವಾಡ ಗ್ರಾಮದ ಲಕ್ಷ್ಮೀ ಸಂಜಯ ಪಾಟೀಲಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಶುಭ ಹಾರೈಸಿ ಬೀಳ್ಕೊಟ್ಟರು.

ಲಕ್ಷ್ಮೀಯ ಸಾಹಸ, ಧೈರ್ಯವನ್ನು ಮೆಚ್ಚಿ ಶಾಸಕಿ ಹೆಬ್ಬಾಳಕರ್ ಶುಭ ಹಾರೈಸಿದರು. ಗ್ರಾಮೀಣ ಭಾಗದ ಈ ಹುಡುಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ತನ್ನ ಕ್ರೀಡಾ ಸ್ಫೂರ್ತಿಯನ್ನು ಮೆರೆದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಬೆಳಗಾವಿ ಜಿಲ್ಲೆಗೆ ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು.

ಲಕ್ಷ್ಮೀ ಪಾಟೀಲ ಕುಟುಂಬದವರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಹಾಜರಿದ್ದರು.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -