ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಭವ್ಯ ಚಕ್ಕಡಿ ಶರ್ಯತ್ತಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.
ಗ್ರಾಮೀಣ ಕ್ರೀಡೆಗಳನ್ನು ಇನ್ನೂ ಮುಂದುವರಿಸಿಕೊಂಡು ಬರುತ್ತಿರುವ ಆಯೋಜಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಲಕ್ಷ್ಮೀ ಹೆಬ್ಬಾಳಕರ್, ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ರೈತರು, ಯುವರಾಜ ಕದಂ, ರಘುನಾಥ್ ಖಂಡೇಕರ್, ಮೋನಪ್ಪ ಜಾಧವ್, ಮಲ್ಲಪ್ಪ ತಂಗಣ್ಣಕರ್, ನಾಗನಾಥ್ ಜಾಧವ್, ನಾರಾಯಣ ಗಾವಡೆ, ಬಾಬು ಬೆಳಗಾಂವ್ಕರ್, ಪ್ರಕಾಶ್ ಚಲಾವಟ್ಕರ್, ಅಪ್ಪನ ಖಂಡೇಕರ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.