ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಶಿವಂ ನಗರದ ರಸ್ತೆ ಅಭಿವೃದ್ಧಿಗಾಗಿ 15 ಲಕ್ಷ ರೂ. ಹಾಗೂ ಸಾವಗಾಂವ ಗ್ರಾಮದ ರಸ್ತೆಯ ಅಭಿವೃದ್ಧಿಗಾಗಿ 25 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಗುರುವಾರ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.
ಶಾಸಕರ ನಿಧಿಯಲ್ಲಿ ಹಣವನ್ನು ಬಿಡುಗಡೆ ಮಾಡಿಸಲಾಗಿದ್ದು, ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆಗಳ ಕಾಮಗಾರಿಗಳನ್ನು ನಡೆಸಲು ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಮಯದಲ್ಲಿ ಆಯಾ ಗ್ರಾಮಗಳ ಹಿರಿಯರು, ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ ದೇಸಾಯಿ, ರಾಹುಲ್ ಉರನಕರ್, ಸಂತೋಷ ದೇಸಾಯಿ, ಬಾಳು ಪಾಟೀಲ, ಎನ್ ಕೆ ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.