spot_img
spot_img
spot_img
21.8 C
Belagavi
Tuesday, October 4, 2022
spot_img

ಸರ್ವ ಧರ್ಮಗಳನ್ನು ಗೌರವಿಸುವ ಪ್ರವೃತ್ತಿ ಬೆಳೆಯಲಿ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

spot_img

ಬೆಳಗಾವಿ: ಬುದ್ಧ, ಬಸವ, ಅಂಬೇಡ್ಕರ್, ಏಸುಕ್ರಿಸ್ತ ಮುಂತಾದ ಮಹನೀಯರು ಜಗತ್ತಿಗೆ ಶಾಂತಿ, ಪ್ರೀತಿ, ವಾತ್ಸಲ್ಯಗಳ ಮೂಲಕ ನಾವೆಲ್ಲರೂ ಭಾರತೀಯ ಮಕ್ಕಳು ಎಂದು ತೋರಿಸಿಕೊಟ್ಟಿದ್ದಾರೆ. ಇಂದು ಈ ಎಲ್ಲ ಮಹನೀಯರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಜೀವನಕ್ಕೆ ಒಂದು ಅರ್ಥ ಸಿಗಲಿದೆ ಎಂದು ಬೆಳಗಾವಿ ಗ್ರಾಮಿಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಗಣೇಶಪುರ ಶಿವಂ ನಗರದಲ್ಲಿರುವ ಸೆಂಟ್ ಜಾನ್ ಬಾಪ್ಟಿಸ್ಟ್ ಚರ್ಚ್ ಸುತ್ತಮುತ್ತಲಿನ ರಸ್ತೆಗಳನ್ನು ನಿರ್ಮಾಣ ಮಾಡಿಕೊಟ್ಟ ಹಿನ್ನಲೆಯಲ್ಲಿ ಚರ್ಚಿನ ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಭಾನುವಾರ ಮಾತನಾಡಿದರು.

ದೇವನೊಬ್ಬ ನಾಮ ಹಲವು ಎನ್ನುವ ಹಾಗೆ, ವಿವಿಧ ಧರ್ಮೀಯರು ತಮ್ಮದೇ ಆದ ಪದ್ಧತಿಯಲ್ಲಿ ದೇವರನ್ನು ಸ್ಮರಿಸುತ್ತಾರೆ. ಆದರೆ ಎಲ್ಲ ಧರ್ಮಗಳ ಸಾರವೂ ಒಂದೇ ಆಗಿದ್ದು ಸರ್ವ ಧರ್ಮಗಳನ್ನು ಗೌರವಿಸುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಇದೇ ವೇಳೆ ಚರ್ಚ್ ವತಿಯಿಂದ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಚರ್ಚಿನ ಫಾದರ್ ಮೈಕೆಲ್ ಫರ್ನಾಂಡಿಸ್, ಸಿಸ್ಟರ್ ರೀನಾ, ಚರ್ಚಿನ ಸದಸ್ಯರು, ಸಂತೋಷ ಫರ್ನಾಂಡಿಸ್, ಮಿಲನ್ ಡಿಸೋಜಾ ಹಾಗೂ ಶಿವಂ ನಗರದ ನಿವಾಸಿಗಳು ಉಪಸ್ಥಿತರಿದ್ದರು.

spot_img

Related News

ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ : ರಾಜು ಕಾಗೆ

ಬೆಳಗಾವಿ: ಮುಜರಾಯಿ ಇಲಾಖೆಯ ಅನುದಾನವನ್ನು ಬೇರೆ ರಾಜ್ಯಗಳಿಗೆ ನೀಡಲಾಗುತ್ತಿದೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ‌ ಜೊಲ್ಲೆ ವಿರುದ್ಧ ಕಾಗವಾಡ ಕ್ಷೇತ್ರದ ಮಾಜಿ ಶಾಸಕ ರಾಜು ಕಾಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಐನಾಪೂರ ಪಟ್ಟಣದಲ್ಲಿ ಮಾತನಾಡಿರುವ...

ದುರ್ಗೆ ವೇಷ ಧರಿಸಿ ಹದಗೆಟ್ಟ ವಿರುದ್ಧ ಪ್ರತಿಭಟಿಸಿದ ಬಾಲಕಿ 

ಹುಬ್ಬಳ್ಳಿ : ದುರ್ಗೆಯ ವೇಷ ಧರಿಸಿ ಬಾಲಕಿಯೊಬ್ಬಳು ವೇಷ ಧರಿಸಿ ಹುಬ್ಬಳ್ಳಿಯಲ್ಲಿ ನೀರಿನ ಕೊಚ್ಚೆ ಗುಂಡಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದಿದ್ದಾಳೆ. ಈ ವಿಡಿಯೋ ಮೂಲಕ ರಸ್ತೆಗಳ ದುರವಸ್ಥೆಯ ಬಗ್ಗೆ ಗಮನ ಸೆಳೆಯುವ ಪ್ರಯತ್ನದಲ್ಲಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -