ಬೆಳಗಾವಿ: ಡಿಕೆ ಶಿವಕುಮಾರ್ ಆದಷ್ಟು ಬೇಗನೆ ಮಾಜಿ ಮಂತ್ರಿ ಆಗುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರ ‘ಕೆಲವೊಬ್ಬರು ಕೆಲಸ ಇಲ್ಲದಕ್ಕೆ ಇಂತಹ ಉಸಾಬರಿ ಮಾಡುತ್ತಿರುತ್ತಾರೆ ಎನ್ನುವ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
‘ಮೈ ತುಂಬಾ ಕೆಲಸ ಇದ್ದಾಗ ಯಾವುದೂ ನೆನಪು ಆಗುವುದಿಲ್ಲ. ಕೆಲಸ ಇಲ್ಲದ ಸಮಯದಲ್ಲಿ ಇಂತಹ ವಿಚಾರಗಳು ಬರುತ್ತಿರುತ್ತವೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡಲು ಹೋಗಲ್ಲ ಎಂದರು.