spot_img
spot_img
spot_img
21.1 C
Belagavi
Friday, September 30, 2022
spot_img

ವಿದ್ಯುತ್ ಅವಘಡದಿಂದ ತಾಯಿ-ಮಗ ದುರ್ಮರಣ

spot_img

ಕಲಬುರಗಿ : ವಿದ್ಯುತ್ ಅವಘಡಕ್ಕೆ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಪಟ್ಟಣದ ಯತಿಮಖಾನಾದಲ್ಲಿ ನಡೆದಿದೆ. ತಾಯಿ ಶಾಹಿನಾಬೇಗಂ (40) ಮತ್ತು ಮಗ ಸೋಹೆಲ್ ಖಾನ್ (20) ಎಂಬುವರು ಮೃತ ದುರ್ದೈವಿಗಳು.

ಇಬ್ಬರು ತಗಡಿನ ಮನೆಯಲ್ಲಿ ವಾಸಿಸುತ್ತಿದ್ದು, ತಡರಾತ್ರಿ 3 ಗಂಟೆ ಸುಮಾರಿಗೆ ಮಳೆ ಬಂದಿದೆ . ಈ ವೇಳೆ ಮನೆ ಸೋರಲು ಆರಂಭಿಸಿದ್ದು, ಮಗ ಸೋಹೆಲ್ ಸೋರುತ್ತಿರವುದನ್ನು ಸರಿಪಡಿಸಲು ಹೋಗಿದ್ದಾನೆ. ಈ ವೇಳೆ ಆತನಿಗೆ ವಿದ್ಯುತ್ ತಂತಿ ತಗುಲಿ ನರಳಾಡುತ್ತಿದ್ದಾಗ ತಾಯಿ ಶಾಹಿನಾ ಅವರು ರಕ್ಷಣೆಗೆ ದಾವಿಸಿದ್ದಾರೆ.

ಆಗ ಅವರಿಗೂ ಸಹ ವಿದ್ಯುತ್ ತಗುಲಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ಸ್ಟೇಷನ್ ಬಜಾರ್ ಪೊಲೀಸರು ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

spot_img

Related News

ಇಂದು ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ

ಚಾಮರಾಜನಗರ : ರಾಹುಲ್ ಗಾಂಧಿ ನೇತೃತ್ವದಲ್ಲಿ ದೇಶಾದ್ಯಂತ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಬರಮಾಡಿಕೊಳ್ಳಲು ಕಾಂಗ್ರೆಸ್ ತಯಾರಿ ಜೋರಾಗಿದೆ. ನಾಯಕರನ್ನು ಸ್ವಾಗತಿಸಲು ರಾಜ್ಯ ಕಾಂಗ್ರೆಸ್‌ ನಾಯಕರು ಸರ್ವ ರೀತಿಯಲ್ಲೂ...

ಪ್ರತಿ ಇನ್ಸಸ್ಟಾಗ್ರಾಂ ಪೋಸ್ಟ್ ಗೆ 8 ಕೋಟಿ ರೂ. ಪಡೆಯುವ ವಿರಾಟ್ ಕೊಹ್ಲಿ

ನವದೆಹಲಿ: ವಿರಾಟ್​ ಕೊಹ್ಲಿ ಸಾಮಾಜಿಕ ಜಾಲತಾಣ ಇನ್​ಸ್ಟಾಗ್ರಾಂನಲ್ಲೂ ಹೊಸ ದಾಖಲೆ ಬರೆದಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಅವರು ಪ್ರತಿ ಪ್ರಾಯೋಜಿತ ಪೋಸ್ಟ್​ಗೆ ಬರೋಬ್ಬರಿ 8 ಕೋಟಿ ರೂಪಾಯಿ ಚಾರ್ಜ್​ ಮಾಡುತ್ತಿದ್ದಾರೆ. ಈ ಮೂಲಕ ಇನ್​ಸ್ಟಾಗ್ರಾಂನಲ್ಲಿ ಗರಿಷ್ಠ ಹಣ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -