spot_img
spot_img
spot_img
18.7 C
Belagavi
Monday, September 26, 2022
spot_img

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

spot_img
spot_img

For Breaking News Download App

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಹಿಂಡಲಗಾ ಗಣಪತಿ ಮಂದಿರ ಬಳಿ ನಡೆದಿದೆ. ಕೌಟುಂಬಿಕ ಕಲಹ ಆತ್ಮಹತ್ಯೆಗೆ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಸಹ್ಯಾದ್ರಿ ನಗರದ ಕೃಷಾ ಮನೀಷ್ ಕೇಶವಾಣಿ (36) ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ಮಹಿಳೆ. ನಿನ್ನೆ ಸಂಜೆ ಗಣಪತಿ ದೇವಸ್ಥಾನಕ್ಕೆ ಬಂದಿದ್ದ ಅವರು ಕೆಲ ಹೊತ್ತಿನ ಬಳಿಕ ಕೆರೆಯತ್ತ ತೆರಳಿದ್ದಾರೆ. ಆಗ ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಇನ್ನು ಸುದ್ದಿ ತಿಳಿದು ಸ್ಥಳೀಯರು ಕ್ಯಾಂಪ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಕ್ಯಾಂಪ್ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಎಸ್.ಡಿಆರ್.ಎಫ್ ತಂಡ ಶೋಧ ಕಾರ್ಯ ನಡೆಸಿ, ಕೃಷಾ ಮನೀಷ್ ಕೇಶವಾಣಿ (36) ಹಾಗೂ ಪುತ್ರ ಭಾವಿರಾ ಮನೀಷ್ ಕೇಶವಾಣಿ (4) ಪತ್ತೆ ಹಚ್ಚಿದ್ದಾರೆ. ಇನ್ನೋರ್ವ ಪುತ್ರ ವಿರೇನ್ ಕೇಶವಾಣಿ ಮೃತದೇಹ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದ್ದು, ಇಂದು ಮತ್ತೆ ಶೋಧ ಕಾರ್ಯ ಮುಂದುವರೆಯಲಿದೆ.

For Breaking News Download App

Related News

ನನಗೆ ಭಾಷೆ – ಜಾತಿ ಇಲ್ಲ, ಜನರ ಪ್ರೀತಿ ಒಂದೇ : ಶಾಸಕಿ ಅಂಜಲಿ ನಿಂಬಾಳ್ಕರ್ 

ವರದಿ : ರತ್ನಾಕರ ಗೌಂಡಿ  ಬೆಳಗಾವಿ : ಖಾನಾಪುರ್ ಪಟ್ಟಣದಲ್ಲಿ ಅಂಜಲಿ ನಿಂಬಾಳ್ಕರ್ ನೇತೃತ್ವದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ 60...

ಬೆಳಗಾವಿ : ಭೀಕರ ಅಪಘಾತದಲ್ಲಿ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವು 

ಬೆಳಗಾವಿ: ಕಾರು ಮತ್ತು ಬೈಕ್​ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್​ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್​ನಲ್ಲಿ ನಡೆದಿದೆ. ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -