ಕಾಂತಾರ ಸಿನಿಮಾದ ಮುಹೂರ್ತ ಕಳೆದ ಬಾರಿ ಯಾವ ದೇವಸ್ಥಾನದಲ್ಲಿ ಆಗಿತ್ತೋ, ಮತ್ತೆ ಅದೇ ದೇವಸ್ಥಾನದಲ್ಲೇ ಕಾಂತಾರ ಪ್ರಿಕ್ವೆಲ್ ಮುಹೂರ್ತ ಆಗಲಿದೆಯಂತೆ. ಆನೆಗುಡಿ ಗಣಪತಿ ದೇವಸ್ಥಾನದಲ್ಲೇ ಮುಹೂರ್ತ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆಗಸ್ಟ್ 27ನೇ ತಾರೀಖು ಕಾಂತಾರ ಪ್ರಕ್ವೆಲ್ ಗೆ ಮಹೂರ್ತ ನಿಗದಿಯಾಗಿದೆ. ಕಾಂತಾರ ಮೊದಲ ಭಾಗ ಕೂಡ ಆಗಸ್ಟ್ ನಲ್ಲಿ ಮುಹೂರ್ತ ಕಂಡಿತ್ತು.
ಆಗಸ್ಟ್ ನಲ್ಲಿ ಕಾಂತಾರ ಪ್ರಿಕ್ವೆಲ್ ಗೆ ಮುಹೂರ್ತವಾದರೆ ಸೆಪ್ಟೆಂಬರ್ ತಿಂಗಳಿಂದ ಚಿತ್ರೀಕರಣ ಆರಂಭಿಸಲಿದ್ದಾರಂತೆ ರಿಷಬ್ ಶೆಟ್ಟಿ. ಪಂಜುರ್ಲಿ ದೈವದ ಸುತ್ತವೇ ಚಿತ್ರಕಥೆ ಇರುವುದರಿಂದ ಕೆರಾಡಿ ಸುತ್ತಮುತ್ತವೇ ಶೂಟಿಂಗ್ ಆಗಲಿದೆ ಎನ್ನುವ ಮಾತು ಹರಿದಾಡುತ್ತಿದೆ.