spot_img
23.5 C
Belagavi
Sunday, December 4, 2022
spot_img

ಕೊಲೆಯಾದ ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಗುತ್ತಿಗೆ ನೌಕರಿ 

ಬೆಂಗಳೂರು : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯ ಸೂಳ್ಯ ತಾಲೂಕಿನ ಮಣಿಕ್ಕಾರ್ ಅಂಚೆಯ ಬೆಳ್ಳಾರಿ ಗ್ರಾಮದ ನೆಟ್ಟಾರು ಹೌಸ್ ನಿವಾಸಿಯಾದ ಶ್ರೀಮತಿ ನೂತನ ಕುಮಾರಿ ಅವರಿಗೆ ಮುಖ್ಯಮಂತ್ರಿಯವರ ಸಚಿವಾಲಯಕ್ಕೆ ಹಿರಿಯ ಸಹಾಯಕ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸುವಂತೆ ಆದೇಶಿಸಿದ್ದಾರೆ.

ಜುಲೈ 26 ರಂದು ದಕ್ಷಿಣ ಕನ್ನಡದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಹಂತಕರು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದು, ಇದು ಇಡೀ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದವು. ಈ ವೇಳೆ ಪ್ರವೀಣ್ ಕುಟುಂಬಸ್ಥರಿಗೆ ಸಂತ್ವಾನ ಹೇಳಿದ ಬೊಮ್ಮಾಯಿ ಕುಟುಂಬಕ್ಕೆ ಸರ್ಕಾರದ ಹುದ್ದೆಯನ್ನ ಕೊಡುವ ಭರವಸೆ ನೀಡಿದ್ದರು.

 

 

Related News

50 ಲಕ್ಷ ರೂ,ಗಳ ವೆಚ್ಚದಲ್ಲಿ ಮಂಡೋಳಿ ಗ್ರಾಮದ ರಸ್ತೆಗಳ ಅಭಿವೃದ್ಧಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾ ಗಣಿ ನಿಧಿಯ ವತಿಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು 50 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದು, ಶನಿವಾರ...

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಯೋಜನೆಗಳ ಸರಣಿ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಲ್ಲೆಹೋಳ ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಪಂಚಾಯತ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 60 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಶನಿವಾರ ಕಾಂಕ್ರೀಟ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -