ಮೈಸೂರು: ದಸರಾ ಜಂಬೂ ಸವಾರಿ ಮೆರವಣಿಗೆ ಸಿಎಂ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಸತತ 4ನೇ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ‘ಅಭಿಮನ್ಯು’ ಹೊತ್ತು ಸಾಗುತ್ತಿದ್ದು, ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ. ಅರಮನೆಯಿಂದ ಬನ್ನಿಮಂಟಪದವರೆಗೆ ಈ ಜಂಬೂಸವಾರಿ ಸಾಗಲಿದೆ. ಈ ವೇಳೆ ಜಂಬೂಸವಾರಿಯಲ್ಲಿ 49 ಸ್ತಬ್ಧಚಿತ್ರಗಳು, ವಿವಿಧ ಕಲಾತಂಡಗಳು ಭಾಗಿಯಾಗಿವೆ.
ನಿಗದಿತ ಸಮಯಕ್ಕಿಂತ ತಡವಾಗಿ ಜಂಬೂಸವಾರಿಗೆ ಪುಷ್ಪಾರ್ಚನೆ ಮಾಡಲಾಗಿದೆ. 4.40 ರಿಂದ 5 ಗಳೆ ಒಳಗೆ ಸಲ್ಲುವ ಮೀನ ಲಗ್ನದಲ್ಲಿ ಉಪ್ಪಾರ್ಚನೆ ಆಗಬೇಕಿತ್ತು. ಆದರೆ, ನಿಗದಿತ ಸಮಯಕ್ಕೆ ಪುಷ್ಪಾರ್ಚನೆ ಆಗದೆ 5.9 ನಿಮಿಷಕ್ಕೆ ಅಂದರೆ 9 ನಿಮಿಷ ತಡವಾಗಿ ಪುಷ್ಪಾರ್ಚನೆ ನೆರವೇರಿದೆ.
ದಸರಾ ಜಂಬೂಸವಾರಿ ಮೆರವಣಿಗೆ ಆಯುರ್ವೇದಿಕ್ ಕಾಲೇಜು ವೃತ್ತ ತಲುಪಿದ್ದು, ತಾಯಿ ಚಾಮುಂಡೇಶ್ವರಿ ಅಭಿಮನ್ಯು ಮೇಲೆ ವಿರಾಜಮಾನವಾಗಿ ಕುಳಿತಿರುವಳು. ಜಂಬೂಸವಾರಿ ಸಾಗುವ ರಸ್ತೆಯುದ್ದಕ್ಕೂ ನೆರೆದಿರುವ ಜನ, ಚಾಮುಂಡೇಶ್ವ ವಿಗ್ರಹಕ್ಕೆ ನಮಿಸುತ್ತಿರುವರು.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....