spot_img
spot_img
spot_img
19.5 C
Belagavi
Wednesday, September 28, 2022
spot_img

ಪುರಾಣ ಪ್ರವಚನಗಳು ನಮ್ಮನ್ನು ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ : ಶಾಸಕಿ ಹೆಬ್ಬಾಳಕರ್

spot_img

ಬೆಳಗಾವಿ : ಪುರಾಣ ಪ್ರವಚನಗಳು ನಮ್ಮನ್ನು ಮಾನಸಿಕವಾಗಿ ಗಟ್ಟಿಗೊಳಿಸುತ್ತವೆ. ಮಹಾತ್ಮರು ತಮ್ಮ ನುಡಿಗಳಿಂದ ನಮ್ಮ ಜೀವನವನ್ನು ಪಾವನಗೊಳಿಸುತ್ತಾರೆ. ಯುವ ಜನತೆ ಇತ್ತೀಚೆಗೆ ಹೆಚ್ಚಾಗಿ ಆದ್ಯಾತ್ಮದ ಕಡೆಗೆ ಒಲವು ತೋರಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರದ ತಾರೀಹಾಳ ಗ್ರಾಮದ ಶ್ರೀ ಅಡವಿಸಿದ್ಧೇಶ್ವರ ಮಠದ ಪೂಜ್ಯ ಅಡವಿಸಿದ್ಧೇಶ್ವರ ದೇವರ ನೇತೃತ್ವದಲ್ಲಿ ಶ್ರೀ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಐದು ದಿನಗಳ ಕಾಲ ಹಮ್ಮಿಕೊಂಡ ಆಧ್ಯಾತ್ಮಿಕ ಪ್ರವಚನದ ಕೊನೆಯ ದಿನವಾದ ಭಾನುವಾರ ರಾತ್ರಿ ಪ್ರವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರ ಒಂದು ದೃಷ್ಟಿಯಲ್ಲಿ ಆದ್ಯಾತ್ಮದ ಕ್ಷೇತ್ರವೇ ಆಗಿದೆ. ಕ್ಷೇತ್ರದಲ್ಲಿ ಬಹಳಷ್ಟು ಮಠಗಳು, ಮಂದಿರಗಳು, ಪುರಾತನ ಕ್ಷೇತ್ರಗಳಿವೆ. ಅವುಗಳನ್ನು ಉಳಿಸಿಕೊಳ್ಳಲು ಎಲ್ಲ ರೀತಿಯ ನೆರವನ್ನು ನೀಡುತ್ತ ಬಂದಿದ್ದೇನೆ. ಹಿರಿಯರೊಂದಿಗೆ ಯುವ ಜನತೆಯೂ ಇದಕ್ಕೆ ಕೈ ಜೋಡಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುರಗೋಡ ಮಹಾಂತ ಮಠದ ಶ್ರೀಗಳು, ಕುಂದರಗಿ ಶ್ರೀಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

spot_img

Related News

ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಬೆಂಗಳೂರು: ಇಡಿ ಅಧಿಕಾರಿಗಳ ದಾಳಿಯ ಬಳಿಕ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಕೇಂದ್ರ ತನಿಖಾ ದಳದ ಅಧಿಕಾರಿಗಳು ಡಿ ಕೆ ಶಿವಕುಮಾರ್...

ಮೂರು ಪಡೆಗಳ ಮುಖ್ಯಸ್ಥರಾಗಿ ಅನಿಲ್ ಚವ್ಹಾಣ್ ನೇಮಕ

ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ. ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -