ಬೆಂಗಳೂರು: ರಾಜ್ಯದಲ್ಲಿ ಮಹಾರಾಷ್ಟ್ರ ಸಚಿವರು ಪ್ರವೇಶಿಸುವುದಕ್ಕೆ ಬಿಡುವುದಿಲ್ಲ. ಮಹಾರಾಷ್ಟ್ರ ಸಚಿವರು ಭಯೋತ್ಪಾದನೆಗೆ ಸೇರಿದವರಾಗಿದ್ದಾರೆ. ಅಂತಹ ರಾಷ್ಟ್ರ ದ್ರೋಹಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕಕ್ಕೆ ಪ್ರವೇಶಿಸಲು ಬಿಡುವುದಿಲ್ಲವೆಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 6ರಂದು ಬೆಂಗಳೂರಿನಿಂದ 100 ವಾಹನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿಗೆ ಆಗಮಿಸಲಿದ್ದಾರೆ.
ಮಹಾರಾಷ್ಟ್ರದ ಸಚಿವರು ಬೆಳಗಾವಿಗೆ ಬರುವುದಕ್ಕೆ ಜಿಲ್ಲಾಡಳಿತ ಅವಕಾಶ ಕೊಟ್ಟರೂ ನಾವು ಕೊಡುವುದಿಲ್ಲ. ಬೆಳಗಾವಿ ಗಡಿಯಲ್ಲಿ ಸಚಿವರನ್ನು ತಡೆಯುವ ಕೆಲಸ ಮಾಡುತ್ತೇವೆ ಎಂದರು.
ಮಹಾರಾಷ್ಟ್ರ ಸಚಿವರು ಭಯೋತ್ಪಾಕದ ಕುಲಕ್ಕೆ ಸೇರಿದವರು. ಭಯೋತ್ಪಾದನೆ ಉಂಟು ಮಾಡುವಂಕ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಅಂತಹ ರಾಷ್ಟ್ರದ್ರೋಹಿಗಳು ಕರ್ನಾಟಕ ಪ್ರವೇಶಿಸುವುದು ಬೇಡ. ಹೀಗಾಗಿ ಗಡಿಯಲ್ಲೇ ಅವರನ್ನು ತಡೆಯುವಂತೆ ಕೆಲಸವನ್ನು ನಮ್ಮಕರವೇ ಕಾರ್ಯಕರ್ತರು ಮಾಡಲಿದ್ದಾರೆ ಎಂದು ಹೇಳಿದರು.