Ad imageAd image

ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್

ratnakar
ಸೋಮವಾರ ಸಂಜೆ ನಕ್ಸಲ್ ನಾಯಕ ವಿಕ್ರಂ ಗೌಡ ಎನ್‌ಕೌಂಟರ್ – ದೃಢಪಡಿಸಿದ ಪರಮೇಶ್ವರ್
WhatsApp Group Join Now
Telegram Group Join Now

ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು (Naxal) ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ (Vikram Gowda) ಎನ್‌ಕೌಂಟರ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ ಎನ್‌ಕೌಂಟರ್ ಮಾಡಿದ್ದಾರೆ. ವಿಕ್ರಂ ಜೊತೆಯಲ್ಲಿದ್ದ ಇಬ್ಬರು ಮೂವರು ಓಡಿ ಹೋಗಿದ್ದಾರೆ. ಆ ಭಾಗದಲ್ಲಿ ಕೂಂಬಿಂಗ್ ಮುಂದುವರಿದಿದೆ. ವಿಕ್ರಂ ಗೌಡ ಸಕ್ರಿಯರಾಗಿದ್ದ ಎಂದು ಪೊಲೀಸರು ಆತನನ್ನು ಹುಡುಕುತ್ತಿದ್ದರು ಎಂದರು.

ವಿಕ್ರಂ ಗೌಡ ಚಲನವಲನಗಳನ್ನು ಪೊಲೀಸರು ಗಮನಿಸುತ್ತಿದ್ದು, ಆತನ ಮೇಲೆ ನಿಗಾ ಇಟ್ಟಿದ್ದರು. ಈಗ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ನಕ್ಸಲ್ ಕಾಲ ಮುಗೀತು ಅಂದುಕೊಂಡಿದ್ದೆವು. ಆದರೆ ಕಳೆದ ವಾರ ರಾಜು ಮತ್ತು ಲತಾ ಎಂಬ ನಕ್ಸಲರು ಪತ್ತೆ ಆಗಿದ್ದಾರೆ. ಅವರಿಬ್ಬರೂ ತಪ್ಪಿಸಿಕೊಂಡು ಹೋಗಿದ್ದಾರೆ ಎಂದು ಕೂಂಬಿಂಗ್ ನಡೆಸಲಾಯಿತು. ಕಳೆದ ಒಂದು ವಾರದಿಂದ ಕೂಂಬಿಂಗ್ ನಡೆಯುತ್ತಿತ್ತು. ಆಗ ಇದ್ದಕಿದ್ದಂತೆ ವಿಕ್ರಂ ಗೌಡ ಬರುವ ಮಾಹಿತಿ ಸಿಕ್ಕಿತ್ತು. ಆ ಸಂದರ್ಭದಲ್ಲಿ ಪೊಲೀಸರಿಗೆ ವಿಕ್ರಂ ಗೌಡನನ್ನು ಎನ್‌ಕೌಂಟರ್ ಮಾಡುವುದು ಅನಿವಾರ್ಯವಾಯಿತು ಎಂದು ತಿಳಿಸಿದರು.

ಪೊಲೀಸರ ಮೇಲೆ ವಿಕ್ರಂ ಗೌಡ ತಂಡ ದಾಳಿ ಮಾಡಿದೆ. ಹಾಗಾಗಿ ಪೊಲೀಸರು ಎನ್‌ಕೌಂಟರ್ ಮಾಡಬೇಕಾಯಿತು. ನಕ್ಸಲರನ್ನು ಮುಖ್ಯ ವೇದಿಕೆಗೆ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೆ ಪಾವಗಡ ಭಾಗದಲ್ಲಿ ನಕ್ಸಲರನ್ನು ಮಾತನಾಡಿ ಮುಖ್ಯವೇದಿಕೆಗೆ ಕರೆತರಲಾಗಿತ್ತು. ಈಗಲೂ ಈ ಪ್ರಯತ್ನ ನಡೆಯುತ್ತಿದೆ. ಶರಣಾಗಲು ಬಯಸುವ ನಕ್ಸಲರಿಗೆ ಸಾಮಾನ್ಯ ಬದುಕು ನಡೆಸಲು ಸರ್ಕಾರ ಅವಕಾಶ ಮಾಡಿಕೊಡಲಿದೆ. ಅದು ಇದ್ದಿದ್ದೇ. ಆದರೆ ಅರಣ್ಯ ಭಾಗದಲ್ಲಿದ್ದು, ಪೊಲೀಸರ ಮೇಲೆ ತಪ್ಪಿಸಿಕೊಂಡು ಹೋಗಲು ಪ್ರಯತ್ನ ಮಾಡಿದರೇ ಈ ಥರ ಘಟನೆ ಆಗೋದು ಸಹಜ ಎಂದು ಹೇಳಿದರು.

 

WhatsApp Group Join Now
Telegram Group Join Now
Share This Article