LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್

Advertisement
Advertisement
Advertisement

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಅವರಿಂದು (ಆ.17) ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಕುರಿತು ಸಿಎಂ ಫಡ್ನವೀಸ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಭೇಟಿ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ-ರಾಜ್ಯ ಜಂಟಿ ಯೋಜನೆಗಳಿಗೆ ಹೆಚ್ಚಿನ ಬೆಂಬಲ ಕೋರುವ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ. 

ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?
ಈ ಚರ್ಚೆಯ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ಪ್ರಧಾನಮಂತ್ರಿಯವರ ಮಾರ್ಗದರ್ಶನ ಮಹಾರಾಷ್ಟ್ರದ ಬೆಳವಣಿಗೆಗೆ ಅತ್ಯಂತ ಮುಖ್ಯವಾದುದು. ಈ ಭೇಟಿಯು ತಮಗೆ ಸಕಾರಾತ್ಮಕ ಶಕ್ತಿಯನ್ನು ನೀಡಿದೆ. ಅಭಿವೃದ್ಧಿ ದೃಷ್ಟಿಯಿಂದ ಅವರ ಮಾರ್ಗದರ್ಶನ ಹಾಗೂ ರಾಜ್ಯಕ್ಕೆ ಅವರು ನೀಡುವ ಬೆಂಬಲಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ಧನ್ಯವಾದ ಅರ್ಪಿಸಿದ್ದಾರೆ.

ಪ್ರಧಾನಮಂತ್ರಿಯವರೊಂದಿಗಿನ ಮಾತುಕತೆಯ ಬಳಿಕ ಮುಂಬೈಗೆ ವಾಪಸಾಗಲಿರುವ ಮುಖ್ಯಮಂತ್ರಿಗಳು, ಮಂಗಳವಾರ (ಆ.18) ಮುಂಬೈನ `ದಿ ಲಲಿತ್’ ಹೋಟೆಲ್‌ನಲ್ಲಿ ಇಂಡೋ-ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ವತಿಯಿಂದ ಆಯೋಜಿಸಲಾಗಿರುವ 2026ರ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.

ನಿರ್ಮಲಾ ಸೀತಾರಾಮನ್‌ ಭೇಟಿಯಾದ ʻಮಹಾʼ ಸಿಎಂ:
ಇದೇ ವೇಳೆ ನಿರ್ಮಾಲಾ ಸೀತಾರಾಮನ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮುಂಬೈ-ವಧವನ್ ಎಕ್ಸ್‌ಪ್ರೆಸ್‌ವೇ ಸಂಪರ್ಕ ಯೋಜನೆಯಾದ ಉತ್ತನ್-ವಿರಾರ್ ಸಮುದ್ರ ಸೇತುವೆ ನಿರ್ಮಾಣಕ್ಕಾಗಿ ಜಪಾನ್ ಇಂಟರ್‌ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA)ಯಿಂದ ಧನಸಹಾಯವನ್ನು ಪಡೆಯಲು ಅನುಮೋದನೆ ಕೋರಿ ಮನವಿ ಸಲ್ಲಿಸಿದರು. ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ಲೈವುಡ್ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ – ಲಕ್ಷಾಂತರ ರೂಪಾಯಿ ಮೌಲ್ಯದ ಯಂತ್ರೋಪಕರಣ ಸುಟ್ಟು ಭಸ್ಮಬೆಳ್ಳಂದೂರು ಪೊಲೀಸರ ಭರ್ಜರಿ ಬೇಟೆ – ಕಾಮಗಾರಿಗೆ ಅಕ್ರಮವಾಗಿ ಬಳಕೆ ಮಾಡ್ತಿದ್ದ 800 ಕೆಜಿ ಜಿಲೆಟಿನ್ ಜಪ್ತಿಮದುವೆ ಮನೆಯಲ್ಲೂ ʻಡಿ ಬಾಸ್‌, ಡಿ ಬಾಸ್‌ʼ ಜೈಕಾರ – ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿಬಿಜೆಪಿ ಐಟಿ ಸೆಲ್‌ನಿಂದ ಅಮಿತ್ ಮಾಳವೀಯ ಔಟ್‌, ದೀಪಕ್ ಮ್ಹಾಸ್ಕೆಗೆ ಜವಾಬ್ದಾರಿISI ಬೆಂಬಲಿತ ಉಗ್ರ ಜಾಲದ ವಿರುದ್ಧ ಕಾರ್ಯಾಚರಣೆ – ಕರ್ನಾಟಕದಲ್ಲಿ ಮೂವರು ವಶಕ್ಕೆದರ್ಶನ್‌ಗೆ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ – ಖುದ್ದು ಹಾಜರಾತಿ ಅರ್ಜಿ ವಜಾಪ್ರಧಾನಿ ಮೋದಿ ಭೇಟಿಯಾದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ಪಾವನಾ ಹೊಸ ಲುಕ್ – ‘ಡಿಯರ್ ಹಸ್ಬೆಂಡ್’ ಚಿತ್ರತಂಡ ಸೇರಿದ ನಟಿಕೋಟೇಶ್ವರದಲ್ಲಿ ಗಮನಸೆಳೆದ ನಾಗಬನ ಮರಳು ಶಿಲ್ಪಮದುವೆಯಾಗುವಂತೆ ಒತ್ತಾಯ – ಪ್ರೇಯಸಿಯನ್ನು ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ