LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಂದೆ ಮೊಬೈಲ್ ಕೊಡಿಸದಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆ

Advertisement
Advertisement

ಹಾಸನ: ತಂದೆ ಮೊಬೈಲ್  ಕೊಡಿಸಲಿಲ್ಲ ಅಂತ 13 ವರ್ಷದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ  ಹೊರವಲಯದ ಯಡಿಯೂರು  ಗ್ರಾಮದಲ್ಲಿ ನಡೆದಿದೆ.

ಪ್ರೀತಂ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಪ್ರೀತಂ ಚಿತ್ರದುರ್ಗದ ಶ್ರೀನಿವಾಸ್-ಗೌರಮ್ಮ ದಂಪತಿ ಪುತ್ರನಾಗಿದ್ದು, ಕುಟುಂಬ ಸಮೇತ ಯಡಿಯೂರಿನಲ್ಲಿ ನಿರ್ಮಾಣವಾಗುತ್ತಿದ್ದ ಖಾಸಗಿ ಲೇಔಟ್‌ನಲ್ಲಿ ಕೆಲಸ ಮಾಡಲು ಬಂದಿದ್ದರು. 

ಪ್ರೀತಂ ಚಿತ್ರದುರ್ಗದಲ್ಲಿ ಏಳನೇ ತರಗತಿ ಓದುತ್ತಿದ್ದು, ಶನಿವಾರ ಯಡಿಯೂರಿಗೆ ಬಂದಿದ್ದ. ದಂಪತಿ ಲೇಔಟ್‌ನಲ್ಲೇ ಶೆಡ್‌ನೊಳಗೆ ವಾಸವಿದ್ದರು. ಪ್ರೀತಂ ಮೊಬೈಲ್ ಕೊಡಿಸುವಂತೆ ಪೋಷಕರನ್ನು ಒತ್ತಾಯಿಸುತ್ತಿದ್ದ. ಆದರೆ ತಂದೆ ಮೊಬೈಲ್ ಕೊಡಿಸಲು ನಿರಾಕರಿಸಿದ್ದರು. 

ಇದರಿಂದ ಮನನೊಂದು ಶೆಡ್‌ನೊಳಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರುತಂದೆ ಮೊಬೈಲ್ ಕೊಡಿಸದಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆನಾಳೆ ರಾಜೀನಾಮೆ ಕೊಡ್ತೀನಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಳೂರು ಗೋಪಾಲಕೃಷ್ಣ ಆಕ್ರೋಶನಾನು ರಾಜೀನಾಮೆ ಬೆದರಿಕೆ ಹಾಕಿಲ್ಲ: ಎಸ್‌ಎಸ್‌ ಮಲ್ಲಿಕಾರ್ಜುನ್‌ಡಿವೋರ್ಸ್‌ ಬಳಿಕ ಖಿನ್ನತೆ; 5ನೇ ಮಹಡಿಯಿಂದ ಹಾರಿ ಮನೋವೈದ್ಯೆ ಆತ್ಮಹತ್ಯೆಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ: ರುದ್ರಪ್ಪ ಲಮಾಣಿಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶಬ್ರೇಕಪ್ ವದಂತಿಗೆ ಪ್ರತಿಕ್ರಿಯೆ ಕೊಟ್ಟ ಅನುಪಮಾ ಪರಮೇಶ್ವರನ್