LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ 165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿ

Advertisement
Advertisement

ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಖಾಸಗಿ ಫೈನಾನ್ಸ್ ಕರ್ಮಕಾಂಡ ಹೊರಬಿದ್ದಿದೆ. ಇಲ್ಲಿನ ಟಿಳಕವಾಡಿಯಲ್ಲಿರುವ ಅಪೇಕ್ಸ್ ಬಿಜ್ ಕಾರ್ಫ್ ಎಲ್‌ಎಲ್‌ಪಿ ಎಂಬ ಖಾಸಗಿ ಫೈನಾನ್ಸ್ 165 ಕೋಟಿ ರೂ. ವಂಚಿಸಿರುವ ಆರೋಪವಿದ್ದು, ಹೂಡಿಕೆದಾರರು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸೋಮವಾರ (ಜು.13) ಪ್ರತಿಭಟನೆ ನಡೆಸಿದ ಹೂಡಿಕೆದಾರರು ನ್ಯಾಯ ಕೊಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 4% ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಸುಮಾರು 3500ಕ್ಕೂ ಹೆಚ್ಚು ಜನರಿಂದ ಹಣ ಸಂಗ್ರಹ ಮಾಡಿ, 165 ಕೋಟಿ ರೂ. ವಂಚಸಿರುವುದಾಗಿ ಹೂಡಿಕೆದಾರರು ಆರೋಪಿಸಿದ್ದಾರೆ. ಜೊತೆಗೆ ಕಂಪನಿಯ ಮಾಲೀಕರಾದ ಕಾಶೀನಾಥ ವಾಗ್ಮೂರೆ ಮತ್ತು ಗಣೇಶ್ ಭಂಡಾರಿ ಅವರು ಹಣ ಸಂಗ್ರಹಿಸಿಕೊಂಡು ದುಬೈಗೆ ಓಡಿಹೋಗಿದ್ದಾರೆ ಎಂದು ದೂರಿದ್ದಾರೆ. 

ಮಾಲೀಕರು ದುಬೈಗೆ ಓಡಿ ಹೋಗಿದ್ದು. ನಮಗೆ ಸರಿಯಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಎಲ್ಲೋ ಕುಳಿತು ಕೇವಲ ವಿಡಿಯೋ ಮಾಡಿ ಹರಿಬಿಡುತ್ತಿದ್ದಾರೆ. ನಮ್ಮ ದುಡ್ಡು ನಮಗೆ ಕೊಡಿಸಿ. ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಆಗ್ರಹಿಸಿದ್ದಾರೆ.

ಬೆಳಗಾವಿಯ ಟಿಳಕವಾಡಿಯಲ್ಲಿರುವ ಖಾಸಗಿ ಫೈನಾನ್ಸ್ ಕಂಪನಿಯು ಜಿಲ್ಲಾಡಳಿತದ ಬಿಗಿ ಕ್ರಮದ ಮಧ್ಯೆಯೂ ಇಷ್ಟೊಂದು ಪ್ರಮಾಣದ ಹಣ ಹೂಡಿಕೆ ಮಾಡಿಕೊಂಡಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ. ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಲಮಟ್ಟಿ ಡ್ಯಾಂನಿಂದ ಕೆರೆಗಳಿಗೆ ನೀರು ಹರಿಸಿ – ಸಿಎಂ ಡಿಕೆಶಿಗೆ ಮಾಜಿ ಸಚಿವ ಶಿವಾನಂದ ಪಾಟೀಲ್ ಮನವಿಬಿಡದಿ ಟೌನ್‌ಶಿಪ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ – ಸಮಿತಿ ರಚಿಸುತ್ತೇನೆ ಎಂದ ಸಿಎಂಬೆಳಗಾವಿಯಲ್ಲಿ 165 ಕೋಟಿ ವಂಚಿಸಿ ವಿದೇಶಕ್ಕೆ ಪರಾರಿತ್ರಿವಳಿ ಕೊಲೆ ಕೇಸ್ – ಬ್ರೈನ್ ಮ್ಯಾಪಿಂಗ್ ಮುನ್ನವೇ ಮೂವರನ್ನು ಕೊಂದಿದ್ದು ನಾನೇ: ತಪ್ಪೊಪ್ಪಿಕೊಂಡ ಆರೋಪಿಕಿಟಕಿ ರಾಡ್ ಮುರಿದು, ಬಟ್ಟೆಯನ್ನೇ ಹಗ್ಗ ಮಾಡಿ ಗೋಡೆ ಹಾರಿದ್ರು – ಕಲಬುರಗಿ ಜೈಲಿನಿಂದ ಸಿನಿಮಾ ಶೈಲಿ ಕೈದಿಗಳು ಎಸ್ಕೇಪ್ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢರಾಮಭಕ್ತರ ಮೇಲೆ ಗುಂಡು ಹಾರಿಸಿದವರಿಂದ ಇಂದು ಉಪದೇಶ- ಎಸ್‌ಪಿ ವಿರುದ್ಧ ಯೋಗಿ ಕಿಡಿNDA ಸೇರ್ಪಡೆಯಾಗದೇ ಮಹಿಳಾ ಮೀಸಲಾತಿ, ಡಿಲಿಮಿಟೇಷನ್‌ ಮಸೂದೆಗೆ ಪವಾರ್ ಬಣ ಬೆಂಬಲ!ಫಿಫಾ ವಿಶ್ವಕಪ್‌ 3ನೇ ಟ್ರೋಫಿ ಕನಸು ಭಗ್ನ – ಅಭಿಮಾನಿಗಳ ಆಕ್ರೋಶಕ್ಕೆ ಹೊತ್ತಿ ಉರಿದ ಫ್ರಾನ್ಸ್‌5 ನಿವೇಶನ, 4 ಫ್ಲಾಟ್‌, ಕಂತೆ ಕಂತೆ ನೋಟು, ಚಿನ್ನಾಭರಣ; 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್‌ ಅರೆಸ್ಟ್‌