LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು

Advertisement
Advertisement

ಬೆಂಗಳೂರು: 19 ಶಾಸಕರು ಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಸಂಪುಟ ಸಚಿವರಾಗಿ ಇಂದು ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಮೊದಲಿಗೆ ಮಾಜಿ ಸಿಎಂ ದಿವಂಗತ ಧರ್ಮಸಿಂಗ್‌ ಅವರ ಪುತ್ರ ಡಾ. ಅಜಯ್‌ ಸಿಂಗ್‌ ಅವರು ಪ್ರಮಾಣವಚನ ಸ್ವೀಕರಿಸಿದರು. ಬಳಿಕ ಕ್ರಮವಾಗಿ ಹೆಚ್‌.ಸಿ.ಬಾಲಕೃಷ್ಣ, ಕೆ.ಎಸ್‌.ಬಸವಂತಪ್ಪ, ಬಸವರಾಜ್‌ ರಾಯರೆಡ್ಡಿ, ಎನ್‌.ಚಲುವರಾಯಸ್ವಾಮಿ, ಲಕ್ಷ್ಮಣ್‌ ಸವದಿ, ಮಧು ಬಂಗಾರಪ್ಪ, ಎಸ್‌.ಎಸ್‌.ಮಲ್ಲಿಕಾರ್ಜುನ್‌, ಬಿ.ನಾಗೇಂದ್ರ, ಪಿ.ಎಂ.ನರೇಂದ್ರಸ್ವಾಮಿ, ಸಿ.ಪುಟ್ಟರಂಗಶೆಟ್ಟಿ, ಟಿ.ರಘುಮೂರ್ತಿ, ರಿಜ್ವಾನ್‌ ಅರ್ಷದ್‌, ರುದ್ರಪ್ಪ ಲಮಾಣಿ, ಸಂತೋಷ್‌ ಲಾಡ್‌, ಶಿವಲಿಂಗೇಗೌಡ, ಶಿವರಾಜ್‌ ತಂಗಡಗಿ, ವಿಜಯಾನಂದ ಕಾಶಪ್ಪನವರ್‌, ಜಮೀರ್‌ ಅಹ್ಮದ್‌ ಪ್ರತಿಜ್ಞಾವಿಧಿ ಸ್ವೀಕರಿಸಿದರು. 

19 ಸಚಿವರು ಪಶ್ಚಿಮಕ್ಕೆ ಅಭಿಮುಖವಾಗಿ ನಿಂತು ಪ್ರಮಾಣವಚನ ಸ್ವೀಕರಿಸಿದರು. ಈ ಹಿಂದೆ ಡಿಕೆಶಿ ಮತ್ತು 13 ಸಚಿವರು ಪೂರ್ವಕ್ಕೆ ಅಭಿಮುಖವಾಗಿ ನಿಂತು ಪ್ರಮಾಣ ವಚನ ಸ್ವೀಕರಿಸಿದ್ದರು. ಸಮಾರಂಭಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿದ್ದರು.

ವಿಧಾನಸಭಾ ಸ್ಪೀಕರ್‌ ಸ್ಥಾನಕ್ಕೆ ರೋಣ ಕ್ಷೇತ್ರದ ಜಿ.ಎಸ್.ಪಾಟೀಲ್‌ ಅವರ ಹೆಸರನ್ನು ಘೋಷಿಸಲಾಗಿದೆ. ಉಪಸಭಾಧ್ಯಕ್ಷ ಸ್ಥಾನಕ್ಕೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೆಸರನ್ನು ಅಂತಿಮಗೊಳಿಸಲಾಗಿದೆ. ಪರಿಷ್‌ ಸಭಾಪತಿ ಸ್ಥಾನಕ್ಕೆ ಸಲೀಂ ಅಹಮದ್‌, ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಅವರ ಹೆಸರು ಪ್ರಕಟಿಸಲಾಗಿದೆ

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಕೆ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರುತಂದೆ ಮೊಬೈಲ್ ಕೊಡಿಸದಿದ್ದಕ್ಕೆ 13 ವರ್ಷದ ಮಗ ಆತ್ಮಹತ್ಯೆನಾಳೆ ರಾಜೀನಾಮೆ ಕೊಡ್ತೀನಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಳೂರು ಗೋಪಾಲಕೃಷ್ಣ ಆಕ್ರೋಶನಾನು ರಾಜೀನಾಮೆ ಬೆದರಿಕೆ ಹಾಕಿಲ್ಲ: ಎಸ್‌ಎಸ್‌ ಮಲ್ಲಿಕಾರ್ಜುನ್‌ಡಿವೋರ್ಸ್‌ ಬಳಿಕ ಖಿನ್ನತೆ; 5ನೇ ಮಹಡಿಯಿಂದ ಹಾರಿ ಮನೋವೈದ್ಯೆ ಆತ್ಮಹತ್ಯೆಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ಬ್ರಿಜ್ ಭೂಷಣ್ ಶರಣ್ ಸಿಂಗ್ ಖುಲಾಸೆಬಹಿರಂಗವಾಗಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ: ತನ್ವೀರ್ ಸೇಠ್ ಅಸಮಾಧಾನಎಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿ ಮಾಡುತ್ತೇನೆ: ರುದ್ರಪ್ಪ ಲಮಾಣಿಸಚಿವ ಸ್ಥಾನ ಸಿಗದಿದ್ದಕ್ಕೆ ಪ್ರಿಯಾಕೃಷ್ಣ ಬೆಂಬಲಿಗರ ತೀವ್ರ ಆಕ್ರೋಶಬ್ರೇಕಪ್ ವದಂತಿಗೆ ಪ್ರತಿಕ್ರಿಯೆ ಕೊಟ್ಟ ಅನುಪಮಾ ಪರಮೇಶ್ವರನ್