LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

25 ಜನ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಬಾಂಬ್‌

Advertisement

ಬೆಂಗಳೂರು: ವಿಧಾನಸಭೆ ಚುನಾವಣೆ ಘೋಷಣೆಯಾದರೆ ಡಿಕೆ ಶಿವಕುಮಾರ್‌  ಸಂಪುಟದ ಸಚಿವರೂ ಸೇರಿ 20 ರಿಂದ 25 ಜನ ಶಾಸಕರು ಬಿಜೆಪಿ ಸೇರೋಕೆ ರೆಡಿ ಇದ್ದಾರೆ ಎಂದು ವಿಜಯೇಂದ್ರ) ಅವರು ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಮಾತಾಡಿದ ವಿಜಯೇಂದ್ರ, ನಾವು ಯಾರನ್ನೂ ಸೆಳೆಯುತ್ತಿಲ್ಲ. ಆದ್ರೆ ನಾಳೆಯೇ ಚುನಾವಣೆ ಘೋಷಣೆಯಾದರೆ 25 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ. ಅದೂ ಸಚಿವರನ್ನ ಒಳಗೊಂಡು ಸೇರುತ್ತಾರೆ. ಅಂಥ ವಾತಾವರಣ ಈಗ ಇದೆ. ಡಿಕೆ ಶಿವಕುಮಾರ್ ಕಾಂಗ್ರೆಸ್ ನಲ್ಲಿ ನಂಬಿಕೆ ಕಳೆದುಕೊಂಡಿದ್ದಾರೆ. ಆಡಳಿತ ಪಕ್ಷದಲ್ಲೇ ಸಿಎಂ ಮೇಲೆ ವಿಶ್ವಾಸ ಹೋಗಿದೆ ಎಂದು ಹೇಳಿದ್ದಾರೆ.

ಮುಂದುವರಿದು… ಕಾಂಗ್ರೆಸ್ ನಲ್ಲಿ ಕೆಲವರು ಅಧಿಕಾರ ಕಸಿದುಕೊಳ್ಳಲು ಸ್ಟಿಂಗ್ ಮಾಡಿದ್ದಾರೆ ಅಂತ ಚರ್ಚೆ ನಡೀತಿದೆ. ಅಧಿಕಾರಕ್ಕಾಗಿ ಸ್ಟಿಂಗ್ ಆಪರೇಷನ್  ಮಾಡಿಸೋದು ರಾಜಕೀಯ ವ್ಯಭಿಚಾರ ಎಂದು ಲೇವಡಿ ಮಾಡಿದ್ದಾರೆ.

ಕೆಲವರು ಸಚಿವರಾಗಲು, ಕೆಲವರು ಸಿಎಂ ಆಗಲು ಸ್ಟಿಂಗ್ ಮಾಡಿದ್ದಾರೆ ಅನ್ನೋ ಚರ್ಚೆ ನಡೆದಿದೆ. ಸ್ಟಿಂಗ್ ಆಪರೇಷನ್ ನಂತಹ ಬೆಳವಣಿಗೆ ಕರ್ನಾಟಕದ ರಾಜಕೀಯದ ದೃಷ್ಟಿಯಿಂದ ಒಳ್ಳೆಯದಲ್ಲ. ಯಾರು ಯಾರ ವಿರುದ್ಧ ಸ್ಟಿಂಗ್ ಮಾಡಿದ್ದಾರೆ ಎಲ್ಲವರೂ ಚರ್ಚೆ ಅಗುತ್ತಿದೆ. ಮುಂದೆ ಎಲ್ಲವೂ ಬಹಿರಂಗವಾಗಲಿದೆ. 420 ಕೆಲಸ ಮಾಡಿದವರು ಅನುಭವಿಸುತ್ತಾರೆ. ಕರ್ನಾಟಕದ ರಾಜಕಾರಣ ಈ ಮಟ್ಟಕ್ಕೆ ಹೋಗಬಾರದಿತ್ತು, ದುರಾದೃಷ್ಟವಶಾತ್ ಹೋಗಿದೆ. ಸ್ಟಿಂಗ್ ಮಾಡೋದು ರಾಜಕೀಯ ವ್ಯಭಿಚಾರದ ಹಾಗೆ ಅಂತ ಕಿಡಿ ಕಾರಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಂದುವರಿದ ಮಹದೇವಪ್ಪ ಮುನಿಸು – ಸಿದ್ರಾಮಯ್ಯಗೆ ಆಹ್ವಾನವಿಲ್ಲದೇ ʻಸಂವಿಧಾನ ದಿನʼ ಆಚರಣೆ25 ಜನ ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಬಾಂಬ್‌SIR ನಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆಭೀಕರ ಘರ್ಷಣೆಯಲ್ಲಿ ಬಿಜೆಪಿ ಮಾಜಿ ಶಾಸಕನನ್ನೇ ಹೊಡೆದು ಕೊಂದ ಗ್ರಾಮಸ್ಥರುಸ್ಟಿಂಗ್ ಆಪರೇಷನ್ ರಾಜಕೀಯ ನಾಟಕ, ಡಿ.ಕೆ ಶಿವಕುಮಾರ್ ಆಸ್ಕರ್ ಪ್ರಶಸ್ತಿಗೆ ಯೋಗ್ಯರು: ಸಿ.ಟಿ ರವಿ ವ್ಯಂಗ್ಯಎಕೆ-47 ಹಿಡಿದು ನಿಲ್ಲಿಸಲು ನಾವೇನು ಉಗ್ರಗಾಮಿಗಳೇ? – ಕೇಂದ್ರದ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಭಾರತೀಯ ನೌಕಾಪಡೆಗೆ ಆನೆಬಲ – 3ನೇ ಜಲಾಂತಗಾರ್ಮಿ ಐಎನ್‌ಎಸ್ ಮಂಗ್ರೋಲ್ ಸೇರ್ಪಡೆSC, ST ಮೀಸಲಾತಿ ಹೆಚ್ಚಿಸಿದ್ದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್ಕಾಂಗ್ರೆಸ್‌ನಿಂದ ಸುಪ್ರೀಂ ಕೋರ್ಟ್ ಚಲೋ – ದೆಹಲಿಯ 6 ಮೆಟ್ರೋ ನಿಲ್ದಾಣಗಳು ಬಂದ್ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿ ಕ್ಷಿಪಣಿ ದಾಳಿ: ಹೈದರಾಬಾದ್ ಮೂಲದ ವ್ಯಕ್ತಿ ದುರ್ಮರಣ