ಚಿತ್ರದುರ್ಗ: ಎದೆ ಉರಿ ಎಂದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ನಡೆದಿದೆ.
ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ (4) ಮೃತ ಬಾಲಕ. ವೈಷ್ಣವ್ ತನಗೆ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿಸಿದ್ದಾನೆ. ಕೂಡಲೇ ಪೋಷಕರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಬಾಲಕ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೃದಯಾಘಾತದಿಂದ ಬಾಲಕ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.




